ಪ್ರತಿಭಟನಾಕಾರರು, ಪೊಲೀಸರ ನಡುವೆ ಸಂಘರ್ಷದ ಚಿತ್ರ 
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಜಂತರ್ ಮಂತರ್‌ನಲ್ಲಿ ಕಲ್ಲು ತೂರಾಟ; ಐವರು ಪೊಲೀಸರಿಗೆ ಗಾಯ!

ಗಾಯಗೊಂಡ ಎಲ್ಲಾ ಅಧಿಕಾರಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಘೋಷಣೆಯಾದ ಬೆನ್ನಲ್ಲೇ ಜಂತರ್ ಮಂತರ್ ಬಳಿ ಪ್ರತಿಭಟನಾಕಾರರ ಗುಂಪೊಂದು ಭದ್ರತಾ ಸಿಬ್ಬಂದಿಯತ್ತ ಕಲ್ಲು ತೂರಾಟ ನಡೆಸಿದೆ. ಐವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನಾ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಜನಸಂದಣಿಯನ್ನು ನಿಯಂತ್ರಿಸುತ್ತಿದ್ದಾಗ ಗುಂಪೊಂದು ಉದ್ರಿಕ್ತಗೊಂಡಿದ್ದು, ಹಿಂಸಾಚಾರ ಭುಗಿಲೆದ್ದಿತು. ಗಾಯಗೊಂಡವರಲ್ಲಿ ಒಬ್ಬ ವಿಶೇಷ ಪೊಲೀಸ್ ಆಯುಕ್ತರು, ಇಬ್ಬರು ಎಸಿಪಿ (ACP) ಶ್ರೇಣಿಯ ಅಧಿಕಾರಿಗಳು ಮತ್ತು ಇಬ್ಬರು ಇತರ ಪೊಲೀಸ್ ಸಿಬ್ಬಂದಿ ಸೇರಿದ್ದಾರೆ.

ಗಾಯಗೊಂಡ ಎಲ್ಲಾ ಅಧಿಕಾರಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

ವಿಶೇಷ ಪೊಲೀಸ್ ಆಯುಕ್ತರು ಹಿರಿಯ ಹಾಗೂ ಕ್ಷೇತ್ರ ಮಟ್ಟದ ಅಧಿಕಾರಿಗಳೊಂದಿಗೆ ಸೇರಿ ಜನಸಂದಣಿಯನ್ನು ನಿಯಂತ್ರಿಸುವ ಮತ್ತು ಭದ್ರತಾ ವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ನೋಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾಗ, ಯಾವುದೇ ಪ್ರಚೋದನೆಯಿಲ್ಲದೆ ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕಲ್ಲು ತೂರಾಟದಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಹಿಂಸಾತ್ಮಕ ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಪ್ರಯೋಗಿಸಿದ್ದು, ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಪ್ರತಿಭಟನೆಗೆ ಸಂಬಂಧಿಸಿದಂತೆ ನವದೆಹಲಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ 15 ಎಫ್‌ಐಆರ್‌ಗಳನ್ನು (FIR) ದಾಖಲಿಸಲಾಗಿದೆ. ಪ್ರತಿಭಟನೆಗಳ ಸಂದರ್ಭದಲ್ಲಿ ಇದುವರೆಗೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ. ಇದರ ಜೊತೆಗೆ 65ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ನಟ ಕಿರಣ್ ರಾಜ್ ಮೇಲೆ ಏಕಾಏಕಿ ಸಿಂಹ ದಾಳಿ, ಸ್ಪಷ್ಟನೆ ಕೊಟ್ಟ 'ಕರ್ಣ' ಹೇಳಿದ್ದೇನು? Video

Explainer: ಸೌದಿ ಅರೇಬಿಯಾ ಮೇಲೆ ಹೌತಿ ದಾಳಿ; ಪಾಕ್, ಟರ್ಕಿ ಮೌನ; ಹಳ್ಳ ಹಿಡಿದ ಇಸ್ಲಾಮಿಕ್ NATO?

ಇರಾನ್-ಅಮೆರಿಕ ಸಂಘರ್ಷ: ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು