ಮೃತ ವಿದ್ಯಾರ್ಥಿನಿ ಅಂಕಿತಾ 
ದೇಶ

ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ, ಆದರೆ ನಾನು..: ಮತ್ತೊಬ್ಬ ನೀಟ್ ವಿದ್ಯಾರ್ಥಿನಿ ದುರಂತ ಅಂತ್ಯ!

ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಪತ್ತೆಯಾಗಿದೆ.

ಮುಂಬೈ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲ

ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಪತ್ತೆಯಾಗಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು ಗಳಿಸಿದ ನಂತರ ಆಕೆ ಒತ್ತಡಕ್ಕೊಳಗಾಗಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಶನಿವಾರ ಸಂಜೆ 4.30 ರ ಸುಮಾರಿಗೆ ಆಕೆ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನೀವು ನನಗೆ ತುಂಬಾ ಪ್ರೀತಿ ಕೊಟ್ಟಿದ್ದೀರಿ. ಆದರೆ, ನಿಮ್ಮ ಒಂದೇ ಒಂದು ಆಸೆಯನ್ನು ನಾನು ಪೂರೈಸಲು ಸಾಧ್ಯವಾಗಲಿಲ್ಲ. ಅಮ್ಮ, ನೀವು ಪ್ರತಿಯೊಂದು ಕಷ್ಟದಲ್ಲೂ ನನ್ನನ್ನು ಸ್ನೇಹಿತೆಯಂತೆ ಬೆಂಬಲಿಸಿದ್ದೀರಿ. ದಾದಾ (ಸಹೋದರ), ನೀನು ಕೂಡ ನನಗೆ ತುಂಬಾ ಬೆಂಬಲ ನೀಡಿದ್ದೀಯಾ. ನೀನು ನನ್ನನ್ನು ಅಮ್ಮ ಮತ್ತು ಅಪ್ಪನಿಗಿಂತ ಹೆಚ್ಚಾಗಿ ಪ್ರೀತಿಸಿದ್ದೀಯ. ನನ್ನ ಆತ್ಮಹತ್ಯೆಗೆ ನೀವ್ಯಾರು ಕಾರಣರಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ನಾನು ನೀಟ್ ಓದುತ್ತಿದ್ದಾಗಲೂ, ನೀವು ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ. ನಾನು ವಿಫಲವಾಗಿದ್ದೇನೆ. ನಿಮ್ಮ ಆಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಅಣ್ಣ, ದಯವಿಟ್ಟು ಅಮ್ಮ ಮತ್ತು ಅಪ್ಪನನ್ನು ಚೆನ್ನಾಗಿ ನೋಡಿಕೊ. ಅವರಿಗೆ ಏನೂ ಕೊರತೆಯಾಗಲು ಬಿಡಬೇಡಿ ಎಂದು ಡೆತ್‌ನೋಟ್‌ನಲ್ಲಿ ತಿಳಿಸಿದ್ದಾಳೆ. ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

ಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಬಾಲಿವುಡ್ ನಟಿ ಕತ್ರೀನಾ ಕೈಫ್ ಬಾಡಿ ಶೇಮಿಂಗ್: ಟ್ರೋಲ್ ಮಾಡುವವರ ವಿರುದ್ಧ ನಟಿ ರಮ್ಯಾ ಕಿಡಿ!

Mr Singh ಕುರಿತು AI-ಪೋಸ್ಟ್ ತಂದ ಆಪತ್ತು: ಅಮೆರಿಕದಲ್ಲಿ ಸಿಖ್ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ!