ನಾನಕ್ ರಾಮ್ ಭುರ್ಜಿ 
ದೇಶ

ಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ನಾನಕ್ ರಾಮ್ ಭುರ್ಜಿ ಸಾವು; ಕೊಲೆಯೋ, ಆತ್ಮಹತ್ಯೆಯೋ?

ಮಾಜಿ ಸಚಿವರ ಸಾವಿನ ಬಗ್ಗೆ ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಖನೌ: ಉತ್ತರ ಪ್ರದೇಶದ ಆಡಳಿತರೂಢ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ನಾನಕ್ ರಾಮ್ ಭುರ್ಜಿ(68) ಅವರು ಮಂಗಳವಾರ ಲಖನೌದ ದಾರುಲ್ ಸಫಾ ಹೊಸ ಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದು, ಪೊಲೀಸರು ಅವರ ಸಾವನ್ನು ಅನುಮಾನಸ್ಪದ ಪ್ರಕರಣ ಎಂದು ದಾಖಲಿಸಿಕೊಂಡಿದ್ದಾರೆ.

ಇಂದು ಮಧ್ಯಾಹ್ನ ಈ ಆಘಾತಕಾರಿ ಘಟನೆ ನಡೆದಿದ್ದು, ಶಾಸಕರ ನಿವಾಸದ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತೀವ್ರ ಗಾಯಗೊಂಡಿದ್ದ ನಾನಕ್ ರಾಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಾದ ಕೆಲವೇ ನಿಮಿಷಗಳಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮಾಜಿ ಸಚಿವರ ಸಾವಿನ ಬಗ್ಗೆ ಅವರ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿದು ಬಂದಿಲ್ಲ. ಹೀಗಾಗಿ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದಾರುಲ್ ಸಫಾ ಹೊಸ ಶಾಸಕರ ನಿವಾಸದ ಸಿಬ್ಬಂದಿಯನ್ನು ಸಹ ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ.

ಪೊಲೀಸರು ನಾನಕ್ ರಾಮ್ ಆಕಸ್ಮಿಕವಾಗಿ ಬಿದ್ದಿದ್ದಾರೋ, ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೋ, ಇಲ್ಲಾ ಇನ್ಯಾರಾದರೂ ತಳ್ಳಿದ್ದಾರೆಯೇ ಎಂದು ಕಂಡು ಹಿಡಿಯಲು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ಆರಂಭ; ಟಾಪ್‌ 10 ಚರ್ಚಾ ವಿಷಯಗಳಿವು

ಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆ

ಬಿಡದಿ ಟೌನ್ ಶಿಪ್ ಯೋಜನೆ ಬೇಡ ಎನ್ನುವವರು ಕೋರ್ಟ್ ಗೆ ಹೋಗಲಿ, ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ- ಹೆಚ್. ಸಿ. ಬಾಲಕೃಷ್ಣ!