ಪ್ರಧಾನಿ ಮೋದಿ  
ದೇಶ

ಪ್ರಧಾನಿ ಮೋದಿ ಫೇಸ್‌ಬುಕ್ ಪೋಸ್ಟ್‌ ಡಿಲೀಟ್: Metaಗೆ ಐಟಿ ಸಚಿವಾಲಯ ಸಮನ್ಸ್‌

ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಜುಲೈ 23ರಂದು ಪ್ರಕಟಿಸಲಾದ ಪ್ರಧಾನಿ ಮೋದಿ ಅವರ ಪೋಸ್ಟ್ ನ್ನು ತೆಗೆದುಹಾಕಿದ ಬಗ್ಗೆ ಮೆಟಾದಿಂದ ಸಚಿವಾಲಯ ಸ್ಪಷ್ಟನೆ ಕೇಳಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಯುವಜನರನ್ನು ಉದ್ದೇಶಿಸಿ ಮಾಡಿದ ಫೇಸ್‌ಬುಕ್ ಪೋಸ್ಟ್ ನ್ನು ಕೆಲಕಾಲ ತೆಗೆದುಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾದ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರನ್ನು ವಿವರಣೆ ನೀಡಲು ಕರೆದಿದೆ.

ಮೂಲಗಳ ಪ್ರಕಾರ, ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಜುಲೈ 23ರಂದು ಪ್ರಕಟಿಸಲಾದ ಪ್ರಧಾನಿ ಮೋದಿ ಅವರ ಪೋಸ್ಟ್ ನ್ನು ತೆಗೆದುಹಾಕಿದ ಬಗ್ಗೆ ಮೆಟಾದಿಂದ ಸಚಿವಾಲಯ ಸ್ಪಷ್ಟನೆ ಕೇಳಿದೆ.

ಆ ವಿಡಿಯೊದಲ್ಲಿ ಯುವಜನರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ವಿವಾದಕ್ಕೆ ಪ್ರತಿಕ್ರಿಯಿಸಿರುವ ಮೆಟಾ ವಕ್ತಾರರು, ಪೋಸ್ಟ್ ನ್ನು ತಾಂತ್ರಿಕ ದೋಷದಿಂದ ತಪ್ಪಾಗಿ ತೆಗೆದುಹಾಕಲಾಗಿತ್ತು, ಬಳಿಕ ಅದನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ