ಸಂಗ್ರಹ ಚಿತ್ರ 
ದೇಶ

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಪ್ರತಿಭಟನೆ ನಡೆದ ಎಲ್ಲಾ ರಾಜ್ಯಗಳಿಗೆ, ಸಿಸಿಟಿವಿ ದೃಶ್ಯಗಳು, ಡ್ರೋನ್ ವಿಡಿಯೊಗಳು, ಬಾಡಿ ಕ್ಯಾಮೆರಾ ದೃಶ್ಯಗಳು, ವೈರ್‌ಲೆಸ್ ಸಂವಹನ ದಾಖಲೆಗಳು, ಪಿಸಿಆರ್ ಲಾಗ್‌ಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಯಾವುದೇ ಕಾರಣಕ್ಕೂ ನಾಶಪಡಿಸದೆ ಸುರಕ್ಷಿತವಾಗಿ ಸಂರಕ್ಷಿಸಬೇಕು.

ನವದೆಹಲಿ: ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಗಳಲ್ಲಿ ಬಂಧನಕ್ಕೊಳಗಾದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ದೊಡ್ಡ ರಿಲೀಫ್ ನೀಡಿದೆ.

ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ಮತ್ತು 18 ವರ್ಷದೊಳಗಿನ ಎಲ್ಲಾ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ಜೊತೆಗೆ, ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಡಿಜಿಟಲ್ ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಂರಕ್ಷಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು ಈ ಮಹತ್ವದ ಮಧ್ಯಂತರ ನಿರ್ದೇಶನಗಳನ್ನು ನೀಡಿದೆ.

ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪಗಳು ಪ್ರಾಥಮಿಕ ದೃಷ್ಟಿಯಿಂದ ಸ್ವತಂತ್ರ ಹಾಗೂ ನ್ಯಾಯಸಮ್ಮತ ತನಿಖೆಗೆ ಅರ್ಹವಾಗಿವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಪ್ರತಿಭಟನೆ ನಡೆದ ಎಲ್ಲಾ ರಾಜ್ಯಗಳಿಗೆ, ಸಿಸಿಟಿವಿ ದೃಶ್ಯಗಳು, ಡ್ರೋನ್ ವಿಡಿಯೊಗಳು, ಬಾಡಿ ಕ್ಯಾಮೆರಾ ದೃಶ್ಯಗಳು, ವೈರ್‌ಲೆಸ್ ಸಂವಹನ ದಾಖಲೆಗಳು, ಪಿಸಿಆರ್ ಲಾಗ್‌ಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಯಾವುದೇ ಕಾರಣಕ್ಕೂ ನಾಶಪಡಿಸದೆ ಸುರಕ್ಷಿತವಾಗಿ ಸಂರಕ್ಷಿಸಬೇಕೆಂದು ಸೂಚಿಸಿದೆ.

ಪ್ರತಿಭಟನಾಕಾರರ ಕುರಿತು ಸಂಗ್ರಹಿಸಿರುವ ಡಿಜಿಟಲ್ ಮಾಹಿತಿಯನ್ನೂ ಸಂರಕ್ಷಿಸಬೇಕು. ಆದರೆ, ಅದನ್ನು ಸಾರ್ವಜನಿಕ ವಲಯಕ್ಕೆ ಬಿಡುಗಡೆ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ, ಕ್ರಿಮಿನಲ್ ಹಿನ್ನೆಲೆ ಇಲ್ಲದ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಆದರೆ, ಈ ರಕ್ಷಣೆ ಕ್ರಿಮಿನಲ್ ಹಿನ್ನೆಲೆ ಹೊಂದಿರುವವರಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ದೆಹಲಿ ಸರ್ಕಾರಕ್ಕೆ ಈಗಾಗಲೇ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆ ಮುಂದುವರಿಸಲು ನ್ಯಾಯಪೀಠ ಅನುಮತಿ ನೀಡಿದರೂ, ವಿಚಾರಣೆ ಮುಗಿಯುವವರೆಗೆ ಅರ್ಹ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮಹಾರಾಷ್ಟ್ರ, ಬಿಹಾರ, ಕೇರಳ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿಗಳಿಂದ ಸುಪ್ರೀಂ ಕೋರ್ಟ್ ಉತ್ತರ ಕೇಳಿದೆ.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಆರೋಪಗಳು ಸ್ವತಂತ್ರ ಮತ್ತು ನ್ಯಾಯಸಮ್ಮತ ತನಿಖೆಗೆ ಅರ್ಹವಾಗಿವೆ. ಅದೇ ವೇಳೆ ಗಾಯಗೊಂಡಿರುವ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಕುಟುಂಬಗಳ ಆತಂಕವನ್ನೂ ತನಿಖೆ ಪರಿಗಣಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ.

ಸ್ವತಂತ್ರ ತನಿಖಾ ಸಮಿತಿ ಅಥವಾ ವಿಶೇಷ ತನಿಖಾ ತಂಡ (SIT) ರಚಿಸುವ ಕುರಿತು ತೀರ್ಮಾನ ಕೈಗೊಳ್ಳುವ ಮೊದಲು, ಕೇಂದ್ರ ಸರ್ಕಾರ ಹಾಗೂ ಸಂಬಂಧಿತ ರಾಜ್ಯ ಸರ್ಕಾರಗಳು ತಮ್ಮ ನಿಲುವನ್ನು ದಾಖಲಿಸುವಂತೆ ನ್ಯಾಯಪೀಠ ನಿರ್ದೇಶನ ನೀಡಿದೆ.

ವಿಚಾರಣೆ ಆರಂಭದಲ್ಲೇ, "ಪೊಲೀಸ್ ದೌರ್ಜನ್ಯ ಆರೋಪಗಳ ಕುರಿತು ಸ್ವತಂತ್ರ ತನಿಖೆಗೆ ಏಕೆ ಆದೇಶಿಸಬಾರದು?" ಎಂದು ಪ್ರಶ್ನಿಸಿದ ನ್ಯಾಯಪೀಠ, "ಯಾರು ಕಾನೂನನ್ನು ಕೈಗೆತ್ತಿಕೊಂಡಿದ್ದಾರೋ, ಯಾರು ಮಿತಿಮೀರಿದ ಕ್ರಮ ಕೈಗೊಂಡಿದ್ದಾರೋ ಅವರ ವಿರುದ್ಧ ಕಾನೂನು ಕ್ರಮ ಜರುಗಲೇಬೇಕು ಎಂದು ಕಠಿಣ ಸಂದೇಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!