ಪ್ರಧಾನಿ ನರೇಂದ್ರ ಮೋದಿ  
ದೇಶ

ತಪ್ಪಾಯ್ತು...ತಾಂತ್ರಿಕ ದೋಷದಿಂದ ಹಾಗಾಯ್ತು..: ಪ್ರಧಾನಿ ಮೋದಿ ವಿಡಿಯೊ ನಿರ್ಬಂಧಕ್ಕೆ ಕ್ಷಮೆಯಾಚಿಸಿದ Meta

ವಿಡಿಯೊವನ್ನು ತಪ್ಪಾಗಿ ತೆಗೆದುಹಾಕಲಾಗಿತ್ತು. ಇದೀಗ ಅದನ್ನು ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೊವನ್ನು ಭಾರತದಲ್ಲಿ ಫೇಸ್‌ಬುಕ್‌ನಲ್ಲಿ ಕೆಲಕಾಲ ನಿರ್ಬಂಧಿಸಿದ್ದ ಘಟನೆಗೆ ಸಂಬಂಧಿಸಿ ಮೆಟಾ ಕೇಂದ್ರ ಸರ್ಕಾರದ ಕ್ಷಮೆ ಕೋರಿದೆ. ತಾಂತ್ರಿಕ ದೋಷದಿಂದ ಈ ಘಟನೆ ಸಂಭವಿಸಿದ್ದು, ತಪ್ಪಾಗಿ ತೆಗೆದುಹಾಕಲಾದ ವಿಡಿಯೊವನ್ನು ಮರುಸ್ಥಾಪಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ವಿಡಿಯೊವನ್ನು ತಪ್ಪಾಗಿ ತೆಗೆದುಹಾಕಲಾಗಿತ್ತು. ಇದೀಗ ಅದನ್ನು ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಈ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಮೆಟಾ ನೀಡಿರುವ ವಿವರಣೆ ಹಾಗೂ ವಿಡಿಯೊ ತೆಗೆದುಹಾಕಲು ಕಾರಣವಾದ ಸಂದರ್ಭಗಳ ಕುರಿತು ಪರಿಶೀಲನೆ ನಡೆಸುತ್ತಿದೆ.

ಈ ಸಂಬಂಧ ಮೆಟಾ ಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳನ್ನು ವಿವರಣೆ ನೀಡಲು ಸರ್ಕಾರ ಸಮನ್ಸ್‌ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರ ಫೇಸ್‌ಬುಕ್ ವಿಡಿಯೊವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದ ಘಟನೆ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾ ಮತ್ತು ಇನ್‌ಸ್ಟಾಗ್ರಾಂನ ಜಾಗತಿಕ ಮುಖ್ಯಸ್ಥರನ್ನು ವಿಚಾರಣೆಗೆ ಕರೆದಿದೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಜುಲೈ 23ರಂದು ಅಪ್‌ಲೋಡ್ ಮಾಡಲಾದ ಈ ವಿಡಿಯೊದಲ್ಲಿ, ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರಧಾನಿ ಮೋದಿ ಅವರು ಝೆನ್ Z ಯುವಕರನ್ನು ಉದ್ದೇಶಿಸಿ ಮಾತನಾಡಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳನ್ನು ಘೋಷಿಸಲಿದೆ ಎಂದು ಅವರು ತಿಳಿಸಿದ್ದರು.

ವಿಡಿಯೊ ಮರುಸ್ಥಾಪನೆಗಿಂತ ಮೊದಲು, ಭಾರತದಲ್ಲಿನ ಬಳಕೆದಾರರಿಗೆ ಕಾನೂನುಬದ್ಧ ವಿನಂತಿಯ ಮೇರೆಗೆ ಈ ಪ್ರದೇಶದಲ್ಲಿ ವಿಡಿಯೊ ಲಭ್ಯವಿಲ್ಲ ಎಂಬ ಸಂದೇಶ ಕಾಣಿಸಿಕೊಂಡಿತ್ತು. ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದ್ದ ಈ ವಿಡಿಯೊವನ್ನು ಇಂದು ಬೆಳಗ್ಗೆ ಕೆಲಕಾಲ ಫೇಸ್‌ಬುಕ್‌ನಲ್ಲಿ ನಿರ್ಬಂಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇಕೆದಾಟು ಯೋಜನೆಗೆ ಸಿಕ್ಕಿತು ಕೇಂದ್ರದ ಬಲ; ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಎಂದ ಜಲಶಕ್ತಿ ಸಚಿವಾಲಯ

ಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು, ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!

VB-G RAM G ಯೋಜನೆಗೆ ಹಣದ ಕೊರತೆಯೇ ಇಲ್ಲ, ಗ್ರಾಮೀಣ ಉದ್ಯೋಗಕ್ಕೆ 2,900 ಕೋಟಿ ರೂ. ಬಿಡುಗಡೆ: ರಾಜ್ಯ ಸರ್ಕಾರ

ಮೇಕೆದಾಟು ಯೋಜನೆಗೆ ಸಮ್ಮತಿ ಅಗತ್ಯವೇ ಇಲ್ಲ: ಕರ್ನಾಟಕದ ಹಕ್ಕು ಪುನರುಚ್ಚರಿಸಿದ ಕೇಂದ್ರ ಸರ್ಕಾರ ಡಿಕೆಶಿ ಧನ್ಯವಾದ

ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ; ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ: ಆರ್. ಅಶೋಕ್ ಆರೋಪ