ಜೀತೇಂದ್ರ ಸಿಂಗ್ 
ದೇಶ

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ರ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ನವದೆಹಲಿ: ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ವಿಪಕ್ಷಗಳ ಗದ್ದಲದ ನಡುವೆ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ತನ್ನ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು ಪ್ರತಿಪಾದಿಸಿತು.

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದು ಇದಕ್ಕೆ ಉತ್ತರ ನೀಡಬೇಕೆಂದು ವಿಪಕ್ಷಗಳ ಆಗ್ರಹಿಸಿದವು. ಪ್ರತಿಭಟನೆಗಳು ನಡುವೆಯೇ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿನ ತಿದ್ದುಪಡಿಗಳು ಸಾರ್ವಜನಿಕ ಪರೀಕ್ಷೆಗಳ ಸಮಗ್ರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತವೆ ಎಂದು ಹೇಳಿದರು.

ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026 ಅನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕಾರ್ಯನಿರ್ವಹಿಸಿದೆ ಮತ್ತು ಸಾರ್ವಜನಿಕ ಪರೀಕ್ಷೆಗಳ ಸಮಗ್ರತೆಯನ್ನು ಬಲಪಡಿಸಲು ಬದ್ಧವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

E20 ಇಂಧನದಿಂದ ವಾಹನಗಳ ಭಾಗಗಳಿಗೆ ಹಾನಿ?: ರಾಜ್ಯಸಭೆಯಲ್ಲಿ ಗಡ್ಕರಿ ಕೊಟ್ರು ಬಿಗ್ ಅಪ್ಡೇಟ್!

Indian Stock Market: ಸತತ 2ನೇ ದಿನವೂ ಭಾರಿ ಏರಿಕೆ, 24 ಸಾವಿರ ಅಂಕ ಗಡಿ ದಾಟಿದ Nifty50

Telegram ಸಂಸ್ಥಾಪಕ ಪಾವೆಲ್ ಡುರೊವ್ ವಿರುದ್ಧ ಅಂತಾರಾಷ್ಟ್ರೀಯ ಬಂಧನ ವಾರಂಟ್ ಹೊರಡಿಸಿದ ರಷ್ಯಾ!

ICC T20 Ranking: ಜಿಂಬಾಬ್ವೆ ಸರಣಿ ನಂತರ ಬರೋಬ್ಬರಿ 230 ಸ್ಥಾನ ಮೇಲೇರಿದ ವೈಭವ್ ಸೂರ್ಯವಂಶಿ

ಅಯೋಧ್ಯೆಯಲ್ಲಿ ಭವ್ಯ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಭಾರೀ ಹಿನ್ನಡೆ; ಕೇವಲ 1.5 ಕೋಟಿ ದೇಣಿಗೆ ಸಂಗ್ರಹ; ಸಣ್ಣ ಮಸೀದಿ ಕಟ್ಟಲು ಟ್ರಸ್ಟ್ ನಿರ್ಧಾರ!