ಸಿಎಂ ಡಿಕೆ ಶಿವಕುಮಾರ್ 
ದೇಶ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಈ ಹಿಂದೆ ಸಮಿತಿಯು ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA)ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದ ಬಳಿ ಕಾವೇರಿ ನೀರಿನ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಾರಿ ವರುಣನ ಕೃಪೆ ಇಲ್ಲದಿರುವುದರಿಂದ, ಈ ಆದೇಶವನ್ನು ಪ್ರಶ್ನಿಸುವ ಕುರಿತು ಸಚಿವರಾದ ರಾಮಲಿಂಗಾರೆಡ್ಡಿ, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಈ ಹಿಂದೆ ಸಮಿತಿಯು ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ ಎಂದು ತಿಳಿಸಿದರು.

ಬೆಂಗಳೂರಿಗೆ ಮರಳಿದ ನಂತರ ವಿರೋಧ ಪಕ್ಷದ ನಾಯಕರ ಜೊತೆಯೂ ಈ ಬಗ್ಗೆ ಚರ್ಚಿಸಲಾಗುವುದು. ಈ ಮಧ್ಯೆ ತಮಿಳುನಾಡು ಸಿಎಂ ವಿಜಯ್‌ ಅವರು ನನ್ನ ಜೊತೆ ಚರ್ಚಿಸಲು ಇಂಗಿತ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ನನ್ನ ಜತೆ ದೂರವಾಣಿ ಮೂಲಕವೂ ಮಾತನಾಡಿದ್ದಾರೆ. ನಾವು ಅವರಿಗೆ ನೀಡಬೇಕಾದ ಗೌರವ ನೀಡಿ, ಸಭೆಗೆ ಬನ್ನಿ ಎಂದು ಹೇಳಿದ್ದೇನೆ. ನಮ್ಮ ರಾಜ್ಯಕ್ಕೆ ಬರುವ ಅತಿಥಿಗಳನ್ನು ಗೌರವದಿಂದ ಸ್ವೀಕರಿಸುವುದು ನಮ್ಮ ಕರ್ತವ್ಯ. ಹೀಗಾಗಿ ಆಹ್ವಾನಿಸಿದ್ದು, ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಮ್ಮ ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿಯನ್ನು ಬಂದು ನೋಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ನಾವು ಮನವಿ ಮಾಡಿದ್ದೇವೆ. ಅದಕ್ಕೆ ಅಗತ್ಯವಿರುವ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದೂ ಹೇಳಿದ್ದೇನೆ. ಅವರಿಗೂ ವಾಸ್ತವ ಪರಿಸ್ಥಿತಿಯ ಅನುಭವ ಆಗಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!

ಊಟ ಬಡಿಸುವುದಕ್ಕೆ ವಿಳಂಬ: ಅತ್ತಿಗೆಯ ಶಿರಚ್ಛೇದ ಮಾಡಿ, ರುಂಡವನ್ನು ಮನೆ ಮುಂದಿದ್ದ ಮರಕ್ಕೆ ನೇತುಹಾಕಿದ್ದ ಹಂತಕನ ಬಂಧನ!