ದೇಶ

ನೀಟ್ ವಿವಾದ: ಮೀಡಿಯಾ ಮುಂದೆ ಬೈಟ್ಸ್ ನೀಡಿದರೆ ಸಮಸ್ಯೆ ಬಗೆಹರಿಯಲ್ಲ; ಕರ್ನಾಟಕ ಸರ್ಕಾರವನ್ನು ಹಿಗ್ಗಾ ಮುಗ್ಗಾ ಜಾಡಿಸಿದ ರಾಘವ್ ಚಡ್ಡಾ!

ಇಂತಹ ಪ್ರಕರಣಗಳನ್ನು ಮಾಧ್ಯಮಗಳಿಗೆ ಸೌಂಡ್‌ಬೈಟ್‌ ನೀಡುವ ಮೂಲಕ ಬಗೆಹರಿಸಲು ಸಾಧ್ಯವಿಲ್ಲ, ಬದಲಿಗೆ ಸಾಂಸ್ಥಿಕ ಪರಿಹಾರದ ಅಗತ್ಯವಿದೆ ಎಂದು ಹೇಳಿದರು.

ದೆಹಲಿ: ದೇಶ್ಯಾದ್ಯಂತ ಭಾರಿ ಸದ್ದು ಮಾಡಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ತಾವು ಏತಕ್ಕಾಗಿ ಮೌನವಹಿಸಿದ್ದರು ಎಂಬುದಕ್ಕೆ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಗುರುವಾರ ವಿವರಣೆ ನೀಡಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ವಿಧೇಯಕದ ಮೇಲಿನ ಚರ್ಚೆಯ ವೇಳೆ ಭಾಷಣ ಮಾಡಿದ ಚಡ್ಡಾ, ಇಂತಹ ಪ್ರಕರಣಗಳನ್ನು ಮಾಧ್ಯಮಗಳಿಗೆ ಸೌಂಡ್‌ಬೈಟ್‌ ನೀಡುವ ಮೂಲಕ ಬಗೆಹರಿಸಲು ಸಾಧ್ಯವಿಲ್ಲ, ಬದಲಿಗೆ ಸಾಂಸ್ಥಿಕ ಪರಿಹಾರದ ಅಗತ್ಯವಿದೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ತಮ್ಮ ಹಳೆಯ ಪಕ್ಷವಾದ ಆಪ್​ ಕಾಲೆಳೆದ ಸಂಸದ ಚಡ್ಡಾ, ವಿರೋಧ ಪಕ್ಷದಿಂದ ಆಡಳಿತ ಪಕ್ಷದ ಸಾಲಿಗೆ ಬಂದ ನಂತರ ತಮ್ಮ ಪಾತ್ರ ಬದಲಾಗಿದ್ದು, ಈಗ ಪರಿಹಾರ ಕಂಡುಕೊಳ್ಳುವುದರ ಮೇಲಷ್ಟೇ ತಮ್ಮ ಗಮನವಿದೆ ಎಂದು ಹೇಳಿದರು.

ನೀಟ್ ಪೇಪರ್ ಲೀಕ್ ಕುರಿತು ತಾವೇಕೆ ಮಾತನಾಡಲಿಲ್ಲ ಎಂದು ಹಲವರು ಪ್ರಶ್ನಿಸಿದ್ದರು ಎಂದ ಚಡ್ಡಾ, ಹಿಂದೆ ನಾನು ವಿರೋಧ ಪಕ್ಷದಲ್ಲಿದ್ದಾಗ ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು, ಅದನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಈಗ ನಾನು ಆಡಳಿತ ಪಕ್ಷದಲ್ಲಿದ್ದೇನೆ, ಹೀಗಾಗಿ ನನ್ನ ಪಾತ್ರ ಬದಲಾಗಿದೆ. ಇನ್ಮುಂದೆ ಪ್ರಶ್ನೆ ಕೇಳುವುದು ನನ್ನ ಜವಾಬ್ದಾರಿಯಲ್ಲ, ಬದಲಿಗೆ ಪರಿಹಾರ ಒದಗಿಸುವುದು ನನ್ನ ಜವಾಬ್ದಾರಿ" ಎಂದು ಅವರು ಹೇಳಿದರು.

ಎನ್‌ಡಿಎ ನೇತೃತ್ವದ ಸರ್ಕಾರವು ಖಚಿತವಾದ ಪರಿಹಾರವನ್ನು ಮುನ್ನೆಲೆಗೆ ತಂದ ನಂತರವೇ ಮಾತನಾಡಲು ಉದ್ದೇಶಪೂರ್ವಕವಾಗಿ ನಿರ್ಧರಿಸಿತ್ತು ಎಂದು ಚಡ್ಡಾ ಹೇಳಿದರು. ಈ ಸಮಸ್ಯೆಗೆ ನಮ್ಮ ಬಳಿ ಪರಿಹಾರ ಸಿಕ್ಕಾಗ ಮಾತ್ರ ಮಾತನಾಡಬೇಕು ಎಂದು ನಾನು ನಿರ್ಧರಿಸಿದ್ದೆ, ಇಂದು ಆ ದಿನ ಬಂದಿದೆ. ನಮ್ಮ ಸರ್ಕಾರ ಈ ಕಾಯಿಲೆಗೆ ಚಿಕಿತ್ಸೆ ತಂದಿದೆ. ನಾನು ಕೂಡ ಟಿವಿ ಕ್ಯಾಮೆರಾಗಳ ಮುಂದೆ ಮಾತನಾಡಬಹುದಿತ್ತು, ಆದರೆ ಅದರ ಬದಲು ನಾವು ಶಾಶ್ವತ ಪರಿಹಾರವನ್ನು ಕಂಡುಕೊಂಡಿದ್ದೇವೆ ಎಂದು ಚಡ್ಡಾ ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಪೇಪರ್ ಲೀಕ್ ಘಟನೆಗಳನ್ನು ನೆನಪಿಸಿದ ಚಡ್ಡಾ, ಕರ್ನಾಟಕದಲ್ಲಿ ಈ ವರ್ಷ ನಡೆದಿದೆ ಎನ್ನಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮಾತನಾಡಿದರು, 2016 ರ ದ್ವಿತೀಯ ಪಿಯುಸಿ ಕೆಮಿಸ್ಟ್ರಿ ಪೇಪರ್ ಲೀಕ್ ಪ್ರಕರಣಗಳನ್ನು ಉಲ್ಲೇಖಿಸಿದರು. ಅಂದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು.

ಆ ವೇಳೆ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದು, ಅವರ ಪಿಎ ಕೆಮಿಸ್ಟ್ರಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದರು, ಅದಾದ ನಂತರ ಮತ್ತೆ ಮರು ಪರೀಕ್ಷೆ ನಿಗದಿ ಪಡಿಸಲಾಗಿತ್ತು, ಪರೀಕ್ಷೆಯ ಹಿಂದಿನ ದಿನ ವಾಟ್ಸಾಪ್ ನಲ್ಲಿ ಮತ್ತೆ ಪ್ರಶ್ನೆ ಪತ್ರಿಕೆ ಸೋರಿಕೆಯಾಯಿತು.

ಸಚಿವರಿಗೆ ರಾಜಿನಾಮೆ ನೀಡುವಂತೆ ಕೇಳಿದಾಗ, ಅದು ತಮ್ಮ ಆಪ್ತ ಸಹಾಯಕನ ವಯಕ್ತಿಕ ವಿಷಯ ನನಗೂ ಅದಕ್ಕೂ ಸಂಬಂಧವಿಲ್ಲ, ನಾನೇಕೆ ರಾಜಿನಾಮೆ ನೀಡಬೇಕು ಎಂದು ಜಾರಿಕೊಂಡಿದ್ದರು. ಇಷ್ಟೆಲ್ಲಾ ಆದ ನಂತರ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಶರಣ್ ಪ್ರಕಾಶ್ ಪಾಟೀಲ್ ಅವರು ಮತ್ತೆ ಅದೇ ಖಾತೆಯನ್ನು ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಧ್ವನಿ ಅತ್ಯಂತ ಪ್ರಮುಖವಾದದ್ದು. ಅವರ ಬೇಡಿಕೆಗಳು ನ್ಯಾಯಯುತವಾಗಿವೆ. ಪ್ರತಿಭಟನೆ ಮಾಡುವುದು, ಪ್ರಶ್ನೆ ಕೇಳುವುದು, ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುವುದು ಹಾಗೂ ಶಾಂತಿಯುತ ಮೆರವಣಿಗೆ ನಡೆಸುವುದು ಅವರ ಸಾಂವಿಧಾನಿಕ ಹಕ್ಕು.

ಆದರೆ ವಿದ್ಯಾರ್ಥಿಗಳ ಪ್ರತಿಭಟನೆ ಎಂದಿಗೂ ವಿದ್ಯಾರ್ಥಿ ಪ್ರತಿಭಟನೆಯಾಗಿಯೇ ಇರಬೇಕು. ಅದು ಯಾವುದೇ ರಾಜಕೀಯ ಪಕ್ಷದ ರ‍್ಯಾಲಿಯಾಗಬಾರದು ಎಂದು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಬಿವಂಡಿಯಲ್ಲಿ ಕಟ್ಟಡ ಕುಸಿತ- ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ

Parliament Monsoon Session: ಸಂಸತ್‌ನಲ್ಲಿ ಮತ್ತೆ ಹೈಡ್ರಾಮಾ; ಅಮಿತ್ ಶಾ ವಿಚಾರವಾಗಿ ಭಾರೀ ಗದ್ದಲ, Lok Sabha-Rajya Sabha ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!