ಕರ್ನಾಟಕ, ಆಂಧ್ರ, ತೆಲಂಗಾಣ ಮುಖ್ಯಮಂತ್ರಿಗಳು 
ದೇಶ

ದೇಶದ ಅರ್ಧದಷ್ಟು ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್; ನಂಬರ್ ಒನ್ ಯಾರು? ಡಿಕೆಶಿ ಮೇಲೆ ಇರುವ ಪ್ರಕರಣಗಳೇಷ್ಟು?

ದೇಶದ 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಇತ್ತೀಚಿಗೆ ತಾವು ಸ್ಪರ್ಧಿಸಿದ ಚುನಾವಣೆ ವೇಳೆ ಸಲ್ಲಿಸಿರುವ ಅಫಿಡವಿಟ್‌ಗಳಿಂದ ಈ ಮಾಹಿತಿ ಸಂಗ್ರಹಿಸಲಾಗಿದೆ.

ನವದೆಹಲಿ: ಭಾರತದ ಪ್ರಸ್ತುತ ಮುಖ್ಯಮಂತ್ರಿಗಳಲ್ಲಿ ಶೇ.45(14) ಜನರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅಗ್ರಸ್ಥಾನದಲ್ಲಿದ್ದಾರೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಬಿಡುಗಡೆ ಮಾಡಿದ ವರದಿ ತಿಳಿಸಿದೆ.

ದೇಶದ 28 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಇತ್ತೀಚಿಗೆ ತಾವು ಸ್ಪರ್ಧಿಸಿದ ಚುನಾವಣೆ ವೇಳೆ ಸಲ್ಲಿಸಿರುವ ಅಫಿಡವಿಟ್‌ಗಳಿಂದ ಈ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಎಡಿಆರ್ ಬಿಡುಗಡೆ ಮಾಡಿದ ವರದಿ ತಿಳಿಸಿದೆ.

31 ಮುಖ್ಯಮಂತ್ರಿಗಳ ಪೈಕಿ 14 ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. ಅವರಲ್ಲಿ 11 ಮುಖ್ಯಮಂತ್ರಿಗಳು ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಬ್ಬರು ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿರುದ್ಧ ದಾಖಲಾಗಿರುವ 89 ಪ್ರಕರಣಗಳಲ್ಲಿ 72 ಪ್ರಕರಣಗಳು ಭಾರತೀಯ ದಂಡ ಸಂಹಿತೆಯ(IPC) ಗಂಭೀರ ವಿಭಾಗಗಳಾದ ಕ್ರಿಮಿನಲ್ ಬೆದರಿಕೆ, ದ್ವೇಷ ಉತ್ತೇಜಿಸುವುದು ಮತ್ತು ಹಲ್ಲೆಯ ಆರೋಪಗಳಾಗಿವೆ.

ರೆಡ್ಡಿ ನಂತರ ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಇದ್ದಾರೆ. ಅವರು 29 ಕ್ರಿಮಿನ್ ಪ್ರಕರಣಗಳನ್ನು ಹೊಂದಿದ್ದಾರೆ.

ಇನ್ನು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಟ್ಟು 19 ಪ್ರಕರಣಗಳನ್ನು ಹೊಂದಿದ್ದಾರೆ. ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಪಂಜಾಬ್‌ ಸಿಎಂ ಭಗವಂತ್ ಮಾನ್, ಸಿಕ್ಕಿಂನ ಪಿ.ಎಸ್. ತಮಾಂಗ್, ಒಡಿಶಾದ ಮೋಹನ್ ಚರಣ್ ಮಾಝಿ ಮತ್ತು ರಾಜಸ್ಥಾನದ ಭಜನ್ ಲಾಲ್ ಶರ್ಮಾ ಅವರು ತಲಾ ಒಂದು ಪ್ರಕರಣಗಳನ್ನು ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಡಿ: ತಮಿಳುನಾಡು CM Vijay ಭೇಟಿಗೆ ಬ್ರೇಕ್ ಹಾಕಿದ ಡಿಕೆಶಿ! "ಎಲ್ಲ ಅಂಕಿ-ಅಂಶ ನ್ಯಾಯಾಲಯದಲ್ಲಿದೆ, ಮೇಲ್ಮನವಿ ಸಲ್ಲಿಸಿದ್ದೇವೆ" ಎಂದ ಸಿಎಂ

ಕಾವೇರಿ ಹೋರಾಟ: 'ಕೈ ಮುಗಿದು ಕೇಳುತ್ತೇನೆ.. ಬಂದ್ ಬೇಡ, ರಾಜ್ಯದ ಹಿತ ಕಾಪಾಡಲು ಎಲ್ಲ ಕಾನೂನು ಹೋರಾಟ ನಡೆಸಿದ್ದೇವೆ': CM ಡಿಕೆ ಶಿವಕುಮಾರ್ ಮನವಿ

ಕಾವೇರಿ ಕಿಚ್ಚು: KRSಗೆ ಬಿಜೆಪಿ ಮುತ್ತಿಗೆ ಯತ್ನ, ವಿಜಯೇಂದ್ರ, ಆರ್. ಅಶೋಕ್ ಸೇರಿ ಹಲವು ನಾಯಕರು ವಶಕ್ಕೆ!

ಕಾವೇರಿ ಜಲ ವಿವಾದ: ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್; ವಾಟಾಳ್ ನಾಗರಾಜ್ ಘೋಷಣೆ

Toxic: ಕಿಚ್ಚು ಹೊತ್ತಿಸಿದ `ತಬಾಹಿ'; ‘ಟಾಕ್ಸಿಕ್’ ಒಪ್ಪಿಕೊಳ್ಳಲು ಕಾರಣ ಬಿಚ್ಚಿಟ್ಟ ಕಿಯಾರಾ ಅಡ್ವಾಣಿ!