ಅಭಿಜೀತ್ ದೀಪ್ಕೆ - ಪ್ರಧಾನಿ ಮೋದಿ 
ದೇಶ

ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ: ಪ್ರಧಾನಿ ಮೋದಿ ಸೆಲ್ಫೀ ವೀಡಿಯೋ ಕುರಿತು CJP ವ್ಯಂಗ್ಯ..!

ಪ್ರಧಾನಿ ಮೋದಿ ಹಂಚಿಕೊಂಡಿದ್ದ ಸೆಲ್ಫೀ ವಿಡಿಯೋಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನವದೆಹಲಿ: ಸಾರ್ವಜನಿಕ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗೆ ಸಂಸತ್ತಿನ ಉಭಯ ಸದನಗಳು ಅನುಮೋದನೆ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳನ್ನುದ್ದೇಶಿಸಿ ಬಿಡುಗಡೆ ಮಾಡಿದ ತಡರಾತ್ರಿ ವಿಡಿಯೋ ಸಂದೇಶಕ್ಕೆ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ವ್ಯಂಗ್ಯವಾಡಿದೆ.

ಪ್ರಧಾನಿ ಮೋದಿ ಹಂಚಿಕೊಂಡಿದ್ದ ಸೆಲ್ಫೀ ವಿಡಿಯೋಗೆ ಪ್ರತಿಕ್ರಿಯಿಸಿರುವ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೇಶದ ಭವಿಷ್ಯಕ್ಕಿಂತ ನಿಮ್ಮ ಚರ್ಮವೇ ಹೆಚ್ಚು ಹೊಳೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಗುರುವಾರ ರಾತ್ರಿ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದರು.

ಅದರಲ್ಲಿ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ–2026ಗೆ ಸಂಸತ್ತಿನ ಉಭಯ ಸದನಗಳು ಅನುಮೋದನೆ ನೀಡಿರುವುದನ್ನು ಸ್ವಾಗತಿಸಿ, ಇದು ದೇಶದಲ್ಲಿ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ತಮ್ಮ ವಿಡಿಯೋ ಸಂದೇಶದಲ್ಲಿ ಮೋದಿ, "ಸ್ನೇಹಿತರೇ, ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ನಾವು ನಿರಂತರವಾಗಿ ಒಂದೊಂದೇ ಹೆಜ್ಜೆ ಇಡುತ್ತಿದ್ದೇವೆ. ವಿಶೇಷ ಕಾರ್ಯಪಡೆಗಳ ರಚನೆ, ತ್ವರಿತ ನ್ಯಾಯಾಲಯಗಳ ಸ್ಥಾಪನೆ ಹಾಗೂ ರಾಜ್ಯಗಳ ಸಲಹೆಗಳನ್ನು ಅಳವಡಿಸಿಕೊಳ್ಳುವಂತಹ ಕ್ರಮಗಳನ್ನು ಕೈಗೊಂಡಿದ್ದೇವೆ.

ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆ ಹಲವು ದಶಕಗಳಿಂದ ದೇಶದ ವಿವಿಧ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರಗಳನ್ನು ಕಾಡುತ್ತಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಹೇಳಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಹಾಗೂ ಪರೀಕ್ಷೆಗಳ ಪಾವಿತ್ರ್ಯವನ್ನು ಕಾಪಾಡಲು ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ಅಗತ್ಯವನ್ನು ಸರ್ಕಾರ ಅರಿತು ಕ್ರಮ ಕೈಗೊಂಡಿದೆ ಎಂದು ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿದು 6 ಸಾವು; ಅವಶೇಷಗಳ ಅಡಿಯಲ್ಲಿ 7 ಮಂದಿ ಸಿಲುಕಿರುವ ಶಂಕೆ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!