ಚಂದ್ರಬಾಬು ನಾಯ್ಡು- ಡಿಕೆ ಶಿವಕುಮಾರ್- ಜೋಸೆಫ್ ವಿಜಯ್ online desk
ದೇಶ

ದೇಶದ ನಂ.1 ಶ್ರೀಮಂತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್; ಚಂದ್ರಬಾಬು ನಾಯ್ಡು 2 ನೇ ಸ್ಥಾನಕ್ಕೆ!

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವವರೆಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿದ್ದರು.

ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಗಳು ಹಾಗೂ ಚುನಾವಣಾ ಅಫಿಡವಿಟ್‌ಗಳ ಪ್ರಕಾರ, ಶ್ರೀಮಂತಿಕೆಯ ವಿಷಯದಲ್ಲಿ ದೇಶದ ಬೇರೆಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿ ಡಿಕೆಶಿ ಮೊದಲ ಸ್ಥಾನದಲ್ಲಿದ್ದಾರೆ.

2023 ರ ವಿಧಾನಸಭಾ ಚುನಾವಣೆಯ ಅಫಿಡವಿಟ್‌ನಲ್ಲಿ ಡಿಕೆಶಿ ಒಟ್ಟು 1,413 ಕೋಟಿ ರೂ. ಮೌಲ್ಯದ ಒಟ್ಟು ಆಸ್ತಿ ಘೋಷಿಸಿದ್ದರು. ಈ ಪೈಕಿ 273 ಕೋಟಿ ಮೌಲ್ಯದ ಚರ ಆಸ್ತಿ ಇದ್ದರೆ ರಿಯಲ್ ಎಸ್ಟೇಟ್ ಮತ್ತು ಜಮೀನು ಸೇರಿ ಸ್ಥಿರ ಆಸ್ತಿಯ ಮೌಲ್ಯ 1,140 ಕೋಟಿ ರೂ. ಇದೆ. 265 ಕೋಟಿ ರೂ.ಗಿಂತ ಹೆಚ್ಚು ಸಾಲವಿದೆ ಎಂದು ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವವರೆಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿದ್ದರು. 2024ರ ವಿಧಾನಸಭೆ ಚುನಾವಣೆಗೂ ಮುನ್ನ ಚಂದ್ರಬಾಬು ನಾಯ್ಡು ಅವರು ಒಟ್ಟು 931 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದರು.

ಡಿಕೆ ಶಿವಕುಮಾರ್ ಸಿಎಂ ಆಗುವುದಕ್ಕೂ ಮೊದಲು ತಮಿಳುನಾಡಿನ ಮುಖ್ಯಮಂತ್ರಿ ಚಂದ್ರಶೇಖರ್ ಜೋಸೆಫ್ ವಿಜಯ್ 648 ಕೋಟಿ ರೂ. ಮೊತ್ತದ ಆಸ್ತಿಯೊಂದಿಗೆ ದೇಶದಲ್ಲೇ ಎರಡನೇ ಸ್ಥಾನದಲ್ಲಿದ್ದರು. ಈಗ ಚಂದ್ರಬಾಬು ನಾಯ್ಡು ಎರಡನೇ ಸ್ಥಾನಕ್ಕೆ ಕುಸಿದಿದ್ದು, ವಿಜಯ್ 3 ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!

ಅಮೆರಿಕಾ ಸರ್ವಾಧಿಕಾರತ್ವ-ಆರ್ಥಿಕ ನಿರ್ಬಂಧಗಳಿಗೆ ಅಂತ್ಯ ಹಾಡಲು 'BRICS' ಒಕ್ಕೂಟ ಸ್ಥಾಪನೆ: Iran

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video