ಪ್ರಧಾನಿ ಮೋದಿ 
ದೇಶ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಜನಾಕ್ರೋಶ: ಇದೇ ಕಾರಣಕ್ಕೆ ಸಿಎಂ ಬದಲಾವಣೆ ಎಂದ ಪ್ರಧಾನಿ ಮೋದಿ!

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಸೂರತ್: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಆಕ್ರೋಶವಿದೆ. ಇದೇ ಕಾರಣಕ್ಕೆ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಹೌದು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಜನರು ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಭಾರತ ಆಶಾವಾದಿಗಳಿಂದ ತುಂಬಿರುವ ನಾಗರಿಕರ ದೇಶವಾಗಿದೆ. ನಕಾರಾತ್ಮಕತೆಯನ್ನು ಮೀರಿ ಸಾಕಷ್ಟು ಮುಂದುವರೆದಿದೆ; ಇದು ಆಶಾವಾದದಿಂದ ಮತ್ತು ಅಸಾಧಾರಣ ಆಕಾಂಕ್ಷೆಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರವಾಗಿದ್ದು, ಇಲ್ಲಿನ ಜನರು ತಮ್ಮ ಕನಸುಗಳನ್ನು ಸಾಕಾರ ಮಾಡಿಕೊಳ್ಳಲು ಬದ್ಧರಾಗಿದ್ದಾರೆ ಎಂದು ಹೇಳುವ ಮೂಲಕ ಆತ್ಮ ನಿರ್ಭರ ಭಾರತ ಯೋಜನೆಯನ್ನು ಲೇವಡಿ ಮಾಡುವವರ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಜೂನ್ 3ರಂದು ಬುಧವಾರ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಡಿಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದಾದ ಎರಡು ದಿನಗಳ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಶಿಕ್ಷಣ ಸಚಿವಾಲಯದ ಚುಕ್ಕಾಣಿ ಹಿಡಿದ ಪ್ರಹ್ಲಾದ್ ಜೋಶಿ: ಕರ್ತವ್ಯ ಪ್ರಜ್ಞೆ-ನಮ್ರತೆಯಿಂದ ಹೊಸ ಜವಾಬ್ದಾರಿ ಸ್ವೀಕರಿಸುವೆ ಎಂದ ಸಚಿವ

'ಇದು ಕೇವಲ ಆರಂಭ... ಸುದೀರ್ಘ ಹಾದಿ ಬಾಕಿಯಿದೆ: ಹೊಸ Video ಬಿಡುಗಡೆ ಮಾಡಿದ Cockroach Janata Party

ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ. ಶಿವಕುಮಾರ್-ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ

ಯಾರ ಒತ್ತಡಕ್ಕೂ ಮಣಿದು ಬರ ಘೋಷಿಸಲ್ಲ, ಮಾತುಕತೆಯಲ್ಲೇ ಮೇಕದಾಟು ವಿವಾದಕ್ಕೆ ಪರಿಹಾರ: ಸಿಎಂ ಡಿಕೆ.ಶಿವಕುಮಾರ್

ಅಸಮರ್ಥ-ಭ್ರಷ್ಟ ಸರ್ಕಾರ ಕಿತ್ತೊಗೆಯುವವರೆಗೆ ವಿರಮಿಸದಿರಿ, ಹೋರಾಟ ಮುಂದುವರೆಸಿ: ವಿದ್ಯಾರ್ಥಿ-ಯುವಜನರಿಗೆ ಸಿದ್ದರಾಮಯ್ಯ ಕರೆ