ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ 
ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ; ಏಳು ಮನೆಗಳಿಗೆ ಬೆಂಕಿ!

ಘಟನೆಯನ್ನು ಖಂಡಿಸಿದ ಕೆಐಎಂ, ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಏಳು ಮನೆಗಳು ಸುಟ್ಟು ಭಸ್ಮವಾಗಿವೆ. ಇದರಿಂದ ವ್ಯಾಪಕ ಹಾನಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ಒಬ್ಬ ಮಹಿಳೆ ಸೇರಿದಂತೆ ಮೂವರು ಕುಕಿ ಗ್ರಾಮಸ್ಥರನ್ನು ಹತ್ಯೆ ಮಾಡಲಾಗಿದೆ ಮತ್ತು ಏಳು ಮನೆಗಳನ್ನು ಸುಟ್ಟು ಹಾಕಲಾಗಿದೆ.

ಕಾಂಗ್ಪೋಕ್ಪಿ ಜಿಲ್ಲೆಯ ಸೈತು-ಗಂಫಜೋಲ್ ಉಪವಿಭಾಗದಲ್ಲಿರುವ ಲೋಯಿಬೋಲ್ ಖುಲ್ಲೆನ್ ಎಂಬ ಸಣ್ಣ ಹಳ್ಳಿಯಲ್ಲಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ.

ಬಲಿಯಾದವರನ್ನು ಲೆತ್ಖೊಂಗಮ್ ಹಾವೊಕಿಪ್, ಅವರ ಪತ್ನಿ ತಿನ್ಮರಿ ಹಾವೊಕಿಪ್ ಮತ್ತು ಜಂಗ್ಮಿನ್ಲಾಲ್ ಹಾವೊಕಿಪ್ ಎಂದು ಗುರುತಿಸಲಾಗಿದೆ.

ಕುಕಿ ಸಂಘಟನೆ ಕುಕಿ ಇನ್ಪಿ ಮಣಿಪುರ(ಕೆಐಎಂ) ರಾಷ್ಟ್ರೀಯ ಸಮಾಜವಾದಿ ಮಂಡಳಿಯ ನಾಗಲಿಮ್(ಎನ್‌ಎಸ್‌ಸಿಎನ್-ಐಎಂ) ಮತ್ತು ಅದರ ಪ್ರಾಕ್ಸಿ ಸಂಘಟನೆಯಾದ ಜೆಲಿಯಾಂಗ್‌ರಾಂಗ್ ಯುನೈಟೆಡ್ ಫ್ರಂಟ್‌ನ ಸಶಸ್ತ್ರ ಬಂಡುಕೋರರು ಈ ದಾಳಿಯನ್ನು ನಡೆಸಿದ್ದಾರೆ ಎಂದು ಆರೋಪಿಸಿದೆ.

ಘಟನೆಯನ್ನು ಖಂಡಿಸಿದ ಕೆಐಎಂ, ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಏಳು ಮನೆಗಳು ಸುಟ್ಟು ಭಸ್ಮವಾಗಿವೆ. ಇದರಿಂದ ವ್ಯಾಪಕ ಹಾನಿಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

"ಈ ಹಿಂಸಾಚಾರ ಕೃತ್ಯವು ಮೂವರು ಅಮಾಯಕ ನಾಗರಿಕರ ದುರಂತ ಹತ್ಯೆಗೆ ಮತ್ತು ಮನೆಗಳು ಹಾಗೂ ಜೀವನೋಪಾಯ ನಾಶಕ್ಕೆ ಕಾರಣವಾಗಿದೆ" ಎಂದು ಸಂಘಟನೆ ಹೇಳಿದೆ. ಅಲ್ಲದೆ ಈ ಘಟನೆಯು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆ ಎಂದು ವಿವರಿಸಿದೆ.

ನಾಗರಿಕರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಮನೆಗಳನ್ನು ಸುಟ್ಟುಹಾಕುವುದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು KIM ಘಟನೆಯನ್ನು ತೀವ್ರವಾಗಿ ಖಂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!