ಕೇರಳದಲ್ಲಿ ಮುಂಗಾರು ಅಬ್ಬರ (ಸಂಗ್ರಹ ಚಿತ್ರ) 
ದೇಶ

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ; ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಕೇರಳದ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಶನಿವಾರ ಬೆಳಗ್ಗೆಯೂ ಮುಂದುವರಿದಿದ್ದು, ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಮರಗಳು ಧರೆಗೆ ಉರುಳಿದ್ದು, ಮನೆಗಳಿಗೆ ಹಾನಿಯಾಗಿದೆ.

ತಿರುವನಂತಪುರಂ: 2 ದಿನಗಳ ಹಿಂದಷ್ಟೇ ಕೇರಳಕ್ಕೆ ಪ್ರವೇಶ ಮಾಡಿದ್ದ ನೈಋತ್ಯ ಮಾನ್ಸೂನ್ ಮಾರುತಗಳು ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ರಾತ್ರಿಯಿಡೀ ಸುರಿದ ಮಳೆಯಿಂದಾಗಿ ರಸ್ತೆಗಳು ಜವಲಾವೃತವಾಗಿ ಹತ್ತಾರು ಮರಗಳು ಧರೆಗುರುಳಿದಿವೆ.

ಕೇರಳದ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಶನಿವಾರ ಬೆಳಗ್ಗೆಯೂ ಮುಂದುವರಿದಿದ್ದು, ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಮರಗಳು ಧರೆಗೆ ಉರುಳಿದ್ದು, ಮನೆಗಳಿಗೆ ಹಾನಿಯಾಗಿದೆ.

ಪರಿಣಾಮವಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ತ್ರಿಶೂರ್ ಜಿಲ್ಲೆಯ ಮನಲೂರು ಪ್ರದೇಶದಲ್ಲಿ ತಾತ್ಕಾಲಿಕ ಶೆಡ್‌ವೊಂದರ ಮೇಲೆ ಮರ ಬಿದ್ದ ಪರಿಣಾಮ, ಅದರ ಕೆಳಗೆ ಮಲಗಿದ್ದ 29 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರದಂದು ಮಲಪ್ಪುರಂ, ಕೋಝಿಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಇದರ ಜೊತೆಗೆ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್ ಮತ್ತು ಪಾಲಕ್ಕಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉಳಿದ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಐಎಂಡಿ ಪ್ರಕಾರ, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ವಯನಾಡು, ಕೋಝಿಕೋಡ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಪ್ರವಾಸಿ ಟ್ರೆಕ್ಕಿಂಗ್ ತಾಣಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ, ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಸಂಚಾರ ಹಾಗೂ ಕಲ್ಲುಗಣಿ ಚಟುವಟಿಕೆಗಳ ಮೇಲೂ ನಿರ್ಬಂಧ ಹೇರಲಾಗಿದೆ. ಇದಲ್ಲದೆ, ವಯನಾಡು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಶನಿವಾರ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ನೈಋತ್ಯ ಮುಂಗಾರು ಈಗಾಗಲೇ ಮಧ್ಯ-ಪಶ್ಚಿಮ ಮತ್ತು ಮಧ್ಯ-ಪೂರ್ವ ಅರಬ್ಬಿ ಸಮುದ್ರದ ಬಹುತೇಕ ಭಾಗಗಳಿಗೆ, ಹಾಗೆಯೇ ಗೋವಾ, ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಿಗೆ ವ್ಯಾಪಿಸಿದೆ.

ಜೂನ್ 6ರಿಂದ 10ರವರೆಗೆ ಭಾರಿ ಮಳೆ

ಉತ್ತರ ಕೇರಳದ ಮೇಲಿರುವ ಚಂಡಮಾರುತೀಯ ವಾಯುಭಾರ ಕುಸಿತದ (Cyclonic Circulation) ಪರಿಣಾಮವಾಗಿ ಜೂನ್ 6ರಂದು ಕಾಸರಗೋಡು, ಕಣ್ಣೂರು, ಕೋಝಿಕೋಡ್, ವಯನಾಡು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ಜೊತೆಗೆ ಜೂನ್ 6ರಿಂದ 9ರವರೆಗೆ ಕೇರಳ ಹಾಗೂ ಮಾಹೆ ಪ್ರದೇಶಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 6ರಿಂದ 10ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯೊಂದಿಗೆ ಗುಡುಗು-ಮಿಂಚು ಹಾಗೂ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ, ಕೇರಳ-ಲಕ್ಷದ್ವೀಪ-ಕರ್ನಾಟಕ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜೂನ್ 6ರಿಂದ 9ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು, ಭಾರತಕ್ಕೆ ಮೊದಲ ಚಿನ್ನ ಪದಕ!

PoK ಮರಳಿ ಪಡೆಯುವುದೇ ಭಾರತ-ಪಾಕ್ ನಡುವೆ ಬಾಕಿ ಇರುವ ಏಕೈಕ ಸಮಸ್ಯೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್