ಸೋನಮ್ ವಾಂಗ್‌ಚುಕ್  
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ..: CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಗುಡುಗು!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಒಟ್ಟಾರೆಯಾಗಿ ಸುಧಾರಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯಲ್ಲಿ ಲಡಾಖ್‌ನ ಪ್ರಸಿದ್ಧ ಎಂಜಿನಿಯರ್, ಶಿಕ್ಷಣ ಸುಧಾರಕ ಮತ್ತು ಪರಿಸರ ಹಾಗೂ ಹವಾಮಾನ ಹೋರಾಟಗಾರ ಸೋನಮ್ ವಾಂಗ್ ಚುಕ್ ಭಾಗವಹಿಸಿದ್ದಾರೆ.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಾಂಗ್ ಚುಕ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ "ಕೇವಲ ಆರಂಭ" ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವುದು ದೊಡ್ಡ ಗುರಿಯಾಗಿದೆ ಎಂದು ಹೇಳಿದರು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಒಟ್ಟಾರೆಯಾಗಿ ಸುಧಾರಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗಳು ಪ್ರಮುಖ ಸಮಸ್ಯೆಗಳಾಗಿವೆ. ಎಲ್ಲರಿಗೂ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಇಡೀ ವ್ಯವಸ್ಥೆಗೆ ಸಮಗ್ರ ಸುಧಾರಣೆಗಳ ಅಗತ್ಯವಿದೆ" ಎಂದು ಅವರು ಹೇಳಿದರು.

ಇದಕ್ಕೂ ಮುನ್ನಾ CJP ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವಾಂಗ್ ಚುಕ್, ಪ್ರತಿಭಟನೆ ಸಂದರ್ಭದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅಥವಾ ಗುಂಪಿನ ಯಾವುದೇ ಸದಸ್ಯರನ್ನು ಬಂಧಿಸಿದರೆ, 42 ದಿನಗ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

KBCಗೆ ಅಮಿತಾಬ್ ಬಚ್ಚನ್ ವಿದಾಯ? ಈ ಬಗ್ಗೆ ಬಿಗ್ ಬಿ ಹೇಳಿದ್ದೇನು?

ನಟ ಕಿರಣ್ ರಾಜ್ ಮೇಲೆ ಏಕಾಏಕಿ ಸಿಂಹ ದಾಳಿ, ಸ್ಪಷ್ಟನೆ ಕೊಟ್ಟ 'ಕರ್ಣ' ಹೇಳಿದ್ದೇನು? Video

Explainer: ಸೌದಿ ಅರೇಬಿಯಾ ಮೇಲೆ ಹೌತಿ ದಾಳಿ; ಪಾಕ್, ಟರ್ಕಿ ಮೌನ; ಹಳ್ಳ ಹಿಡಿದ ಇಸ್ಲಾಮಿಕ್ NATO?

ಇರಾನ್-ಅಮೆರಿಕ ಸಂಘರ್ಷ: ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ