ಸಾಂದರ್ಭಿಕ ಚಿತ್ರ online desk
ದೇಶ

ಜಾರ್ಖಂಡ್‌ನಲ್ಲಿ ಘೋರ ಕೃತ್ಯ: ಹೆತ್ತ ತಂದೆಯಿಂದಲೇ ಮೂವರು ಅಪ್ರಾಪ್ತ ಹೆಣ್ಣುಮಕ್ಕಳ ಹತ್ಯೆ!

ಹೆತ್ತ ತಂದೆಯೇ ತನ್ನ ಆರು ವರ್ಷದ ಇಬ್ಬರು ಹೆಣ್ಣುಮಕ್ಕಳು ಮತ್ತು 17 ವರ್ಷದ ಮತ್ತೊಬ್ಬ ಹೆಣ್ಣುಮಗಳನ್ನು ಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಅತ್ಯಂತ ಅಮನಾವೀಯ ಘಟನೆ ನಡೆದಿದ್ದು, ಸೋಮವಾರ 40 ವರ್ಷದ ವ್ಯಕ್ತಿಯೊಬ್ಬ ತನ್ನ ಮೂವರು ಅಪ್ರಾಪ್ತ ಪುತ್ರಿಯರನ್ನು ಕಡಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ತುರುಕ್ದಿಹಾ ಗ್ರಾಮದಲ್ಲಿ ಇಂದು ಬೆಳಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ.

ಹೆತ್ತ ತಂದೆಯೇ ತನ್ನ ಆರು ವರ್ಷದ ಇಬ್ಬರು ಹೆಣ್ಣುಮಕ್ಕಳು ಮತ್ತು 17 ವರ್ಷದ ಮತ್ತೊಬ್ಬ ಹೆಣ್ಣುಮಗಳನ್ನು ಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ತನ್ನ ಮೂವರು ಅಪ್ರಾಪ್ತ ಪುತ್ರಿಯರನ್ನು ಹರಿತವಾದ ಆಯುಧದಿಂದ ಹೊಡೆದು ಕೊಂದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ" ಎಂದು ಸದರ್ ಎಸ್‌ಡಿಪಿಒ ಜಿತ್ವಹವ್ ಒರಾನ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಪಂದ್ಯ ಮುಗಿಸಿ ಮನೆಗೆ ಮರಳುವಾಗ ಭೀಕರ ಅಪಘಾತ, 4 ಕ್ರಿಕೆಟಿಗರ ದಾರುಣ ಸಾವು!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್