ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು 
ದೇಶ

ದೇಶದ ಮೊದಲ ಪ್ರಧಾನಿ ನೆಹರೂ ದಾಖಲೆ ಮುರಿದ ಮೋದಿಗೆ ಸಚಿವ ಸಂಪುಟ ಗೌರವ; ಎದ್ದು ನಿಂತು ಚಪ್ಪಾಳೆ ತಟ್ಟಿದ ಸಚಿವರು!

ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಇಂದು ಅಂಗೀಕರಿಸಿತು.

ನವದೆಹಲಿ: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆಡಳಿತ ಅವಧಿಯ ದಾಖಲೆಯನ್ನು ಮುರಿಯುವ ಮೂವಲ ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದು, ಭಾರತದ ಅತಿ ಹೆಚ್ಚು ಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದು ಭಾರತೀಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಕ್ಷಣವಾಗಿದ್ದು, ಜವಾಹರಲಾಲ್ ನೆಹರು ಅವರ ದೀರ್ಘಾವಧಿ ಪ್ರಧಾನಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನಾ ನಿರ್ಣಯ ಅಂಗೀಕರಿಸಿದ್ದು, ಸಂಪುಟ ಸಹೋದ್ಯೋಗಿಗಳು ಎದ್ದುನಿಂತು ಚಪ್ಪಾಳೆ ಹೊಡೆಯುವ ಮೂಲಕ ಅಭಿನಂದಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೀರ್ಘಕಾಲದವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಇಂದು ಅಂಗೀಕರಿಸಿತು.

ಕೇಂದ್ರದ ಎಲ್ಲಾ ಸಚಿವರು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದರು.

ಮೋದಿ ಅವರು ಇಂದು(ಜೂ.10) ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಷ್ಟ್ರಪತಿಗಳಿಂದ ಅನಂತ್ ನಾಗ್​ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್​ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ!

ಕಸ್ತೂರಿರಂಗನ್ ವರದಿ: ಕೇಂದ್ರದ ಇಸಿಎ ಅಧಿಸೂಚನೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ತಿರಸ್ಕೃತ; ಒಂದು ವರ್ಷದ ಕಾಲಾವಕಾಶ ಕೋರಿಕೆ!

PSIಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ಬಿಜೆಪಿ ಶಾಸಕನ ಪುತ್ರಿಗೆ ಜಾಮೀನು; ‘ಆ ಘಟನೆ ನಡೆಯಬಾರದಿತ್ತು’ ಎಂದ ಐಶ್ವರ್ಯ!

ಟಿಫಿನ್‌ನಲ್ಲಿ ಮೆಂತ್ಯೆ ಪಲ್ಯ ತಂದಿದ್ದಕ್ಕೆ 50 ರೂ ದಂಡ! ಶಾಲೆಯಲ್ಲಿ ವಿವಾದ, ಏನಿದು 'ಪರ್ಯುಷಣ್ ಪರ್ವ'?

Asian Games 2026: Cricket Finalನಲ್ಲಿ ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ, ಚಿನ್ನದ ಬೇಟೆ!