ನವದೆಹಲಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಸುಷ್ಮಿತಾ ದೇವ್. (Photo | Screengrab)
ದೇಶ

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆ: ಸಂಸದ ಸ್ಥಾನಕ್ಕೆ ಮಮತಾ ಆಪ್ತೆ ಸುಷ್ಮಿತಾ ದೇವ್ ರಾಜಿನಾಮೆ

ಟಿಎಂಸಿ ಈಗಾಗಲೇ ಆಂತರಿಕ ಭಿನ್ನಾಭಿಪ್ರಾಯ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷವನ್ನು ತೊರೆಯುವ ನಾಯಕರ ಮಧ್ಯೆ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೊಲ್ಕೋತಾ: ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ದೊಡ್ಡ ಹಿನ್ನಡೆ ಉಂಟಾಗಿದೆ. ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಆಪ್ತೆಯಾಗಿದ್ದ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಟಿಎಂಸಿ ಈಗಾಗಲೇ ಆಂತರಿಕ ಭಿನ್ನಾಭಿಪ್ರಾಯ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷವನ್ನು ತೊರೆಯುವ ನಾಯಕರ ಮಧ್ಯೆ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಆಘಾತವನ್ನು ಉಂಟು ಮಾಡಿದೆ.

"ನಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ದಯವಿಟ್ಟು ಅದನ್ನು ತಕ್ಷಣ ಜಾರಿಗೆ ಬರುವಂತೆ ಅಂಗೀಕರಿಸಬಹುದು" ಎಂದು ನಿರ್ಗಮಿತ ನಾಯಕಿ ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ರಾಜೀನಾಮೆಯ ಸ್ವಲ್ಪ ಸಮಯದ ನಂತರ, ದೆಹಲಿಯ ನಿವಾಸದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಶರ್ಮಾ ಅವರೊಂದಿಗೆ ನಗುತ್ತಿರುವ ಸುಶ್ಮಿತಾ ದೇವ್ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.

ಸುಷ್ಮಿತಾ ದೇವ್ ಅವರ ರಾಜೀನಾಮೆಯನ್ನು ಪಕ್ಷಕ್ಕೆ ಮತ್ತೊಂದು ರಾಜಕೀಯ ಹೊಡೆತ ಎಂದು ಪರಿಗಣಿಸಲಾಗುತ್ತಿದೆ. ಆದರೆ, ಅವರ ರಾಜೀನಾಮೆಯ ಹಿಂದಿನ ಕಾರಣಗಳನ್ನು ಇನ್ನೂ ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ. ಸುಷ್ಮಿತಾ ದೇವ್ ಬಹಳ ಹಿಂದಿನಿಂದಲೂ ಟಿಎಂಸಿಯ ಪ್ರಮುಖ ಮುಖವಾಗಿದ್ದು, ರಾಷ್ಟ್ರಮಟ್ಟದಲ್ಲಿ ಪಕ್ಷದ ಪರವಾಗಿ ಸಕ್ರಿಯ ಪಾತ್ರ ವಹಿಸಿ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!