ಮೀನಾಕ್ಷಿ ನಟರಾಜನ್ 
ದೇಶ

ರಾಜ್ಯಸಭಾ ಚುನಾವಣೆ: ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಮೀನಾಕ್ಷಿ ನಟರಾಜನ್!

ಪ್ರಮಾಣಪತ್ರದಲ್ಲಿ ಪ್ರಕರಣವೊಂದರ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಮಂಗಳವಾರ ಚುನಾವಣಾ ಅಧಿಕಾರಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿದ್ದಾರೆ.

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಯಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ನಾಯಕೀಯ ತಿರುವು ಪಡೆದುಕೊಂಡಿದ್ದು, ತಾವು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಗುರುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಮಧ್ಯಪ್ರದೇಶದ ಮೂರು ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ.

ಪ್ರಮಾಣಪತ್ರದಲ್ಲಿ ಪ್ರಕರಣವೊಂದರ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಮಂಗಳವಾರ ಚುನಾವಣಾ ಅಧಿಕಾರಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿದ್ದಾರೆ.

ರಾಜ್ಯಸಭಾ ಚುನಾವಣಾ ರಿಟರ್ನಿಂಗ್ ಅಧಿಕಾರಿ ಅರವಿಂದ್ ಶರ್ಮಾ ಹೊರಡಿಸಿದ ಆದೇಶದಲ್ಲಿ, ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ನಂತರ, ಮೀನಾಕ್ಷಿ ನಟರಾಜನ್ ಅವರು ಅಪೂರ್ಣ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕಂಡುಬಂದಿದೆ. ಅವರ ನಾಮಪತ್ರದೊಂದಿಗೆ ಸಲ್ಲಿಸಲಾದ ನಮೂನೆ 26 ರಲ್ಲಿ ದಾಖಲಾಗಿರುವ ಪ್ರಕರಣವೊಂದರ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಬಚ್ಚಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಮಧ್ಯಪ್ರದೇಶದ ವಿಧಾನಸಭೆ ಅಧಿಕಾರಿಯೊಬ್ಬರ ಪ್ರಕಾರ, ರಾಜ್ಯಸಭೆಯ ಮೂರನೇ ಸ್ಥಾನಕ್ಕೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಹೇಶ್ ಕೇವಟ್ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದು, 'ತೆಲಂಗಾಣದಲ್ಲಿ ದಾಖಲಾಗಿರುವ ಪ್ರಕರಣವೊಂದರ ಮಾಹಿತಿಯನ್ನು ಮೀನಾಕ್ಷಿ ನಟರಾಜನ್ ತಮ್ಮ ಅಫಿಡವಿಟ್‌ನಲ್ಲಿ ಉಲ್ಲೇಖಿಸಿಲ್ಲ' ಎಂದು ಆರೋಪಿಸಿದ್ದಾರೆ.

ಜೂನ್ 8 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು ಮತ್ತು ಮಂಗಳವಾರದಿಂದ ನಾಮಪತ್ರಗಳ ಪರಿಶೀಲನೆ ಪ್ರಾರಂಭವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!