ಆರೋಪಿ ಅಭಿಜಿತ್ ಮೆಂಡಲ್ 
ದೇಶ

ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ 3 ವರ್ಷ ಅತ್ಯಾಚಾರ, ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್; ಕೋಚ್ ಬಂಧನ!

ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ ಮತ್ತು ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಖಾಸಗಿ ಫುಟ್‌ಬಾಲ್ ತರಬೇತುದಾರನನ್ನು ಬಂಧಿಸಲಾಗಿದೆ.

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಫುಟ್ಬಾಲ್ ತರಬೇತುದಾರ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ ಮತ್ತು ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಖಾಸಗಿ ಫುಟ್‌ಬಾಲ್ ತರಬೇತುದಾರನನ್ನು ಬಂಧಿಸಲಾಗಿದೆ.

ಆರೋಪಿ, 36 ವರ್ಷದ ಅಭಿಜಿತ್ ಮೆಂಡಲ್ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರ ಪ್ರಕಾರ, 2023 ರಲ್ಲಿ ವಸಾಯಿಯಲ್ಲಿರುವ ತನ್ನ ಫುಟ್‌ಬಾಲ್ ತರಬೇತಿ ಅಕಾಡೆಮಿಗೆ ಸೇರಿದ್ದ 17 ವರ್ಷದ ಬಾಲಕಿಯ ಮೇಲೆ ಮೆಂಡಲ್ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ.

ಹುಡುಗಿಯ ಆಕ್ಷೇಪಾರ್ಹ ವಿಡಿಯೋಗಳನ್ನು ಸಹ ಮಾಡಿದ ಕೋಚ್, ನಂತರ ಅವುಗಳನ್ನು ಬಳಸಿಕೊಂಡು ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಕೋಚ್ ಮೆಂಡಲ್ ಮೊದಲು ತನ್ನ ನಂಬಿಕೆ ಗಳಿಸಿದನು ಮತ್ತು ನಂತರ ಫುಟ್‌ಬಾಲ್‌ನಲ್ಲಿ ದೊಡ್ಡ ದೊಡ್ಡ ಅವಕಾಶಗಳ ಭರವಸೆ ನೀಡುವ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾಳೆ.

ಕಳೆದ ಮೂರು ವರ್ಷಗಳಲ್ಲಿ, ಕೋಚ್ ಹಲವು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾರೆ.

ಲೈಂಗಿಕ ದೌರ್ಜನ್ಯದಿಂದ ಬೇಸತ್ತ ಬಾಲಕಿ, ಆತನ ಸಂಪರ್ಕವನ್ನು ತಪ್ಪಿಸಲು ಪ್ರಯತ್ನಿಸಿದ್ದಾಳೆ. ಆದರೆ ಆರೋಪಿ ತನ್ನ ಬಳಿಯಿದ್ದ ವಿಡಿಯೋಗಳು ಮತ್ತು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾರೆ. ತನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ.

ನಿರಂತರ ಮಾನಸಿಕ ಕಿರುಕುಳದಿಂದ ನೊಂದ ಬಾಲಕಿ ಕೊನೆಗೂ ತನ್ನ ಮನೆಯವರಿಗೆ ನಡೆದ ಘಟನೆಯ ಬಗ್ಗೆ ತಿಳಿಸಿದ್ದಾಳೆ. ನಂತರ ಆಕೆಯ ಕುಟುಂಬ ಪೊಲೀಸರಿಗೆ ದೂರು ನೀಡಿದೆ. ದೂರಿನ ಆಧಾರದ ಮೇಲೆ, ವಸಾಯಿಯ ಮಾಣಿಕ್‌ಪುರ ಪೊಲೀಸರು ಪ್ರಾಥಮಿಕ ವಿಚಾರಣೆಯ ನಂತರ ಮೆಂಡಾಲ್‌ನನ್ನು ಬಂಧಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FIH ವಿಶ್ವಕಪ್ ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ; ಹಾಕಿ ಇಂಡಿಯಾ ನಿರ್ಧಾರಕ್ಕೆ ವ್ಯಾಪಕ ಟೀಕೆ

'ಮೋದಿ, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಇನ್ಫುಲೆನ್ಸರ್ ಆಗಲಿ': ಮಧ್ಯರಾತ್ರಿ 'ಸೆಲ್ಫಿ ವಿಡಿಯೋ'ಗೆ CJP ಸಂಸ್ಥಾಪಕ ಕಿಡಿ

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

ಅಮಿತ್ ಶಾ ವಿರುದ್ಧ ಸುಳ್ಳು ಆರೋಪ; ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಲೇಬೇಕು: Kangana Ranaut

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!