ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿ ಕೆ ಶಿವಕುಮಾರ್ ದಂಪತಿ  
ದೇಶ

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ ಶಿವಕುಮಾರ್; Video

ಡಿ.ಕೆ ಶಿವಕುಮಾರ್ ಅವರು ಮುಂಜಾನೆ ನಡೆಯುವ ದೇವಾಲಯದ ಸೇವೆಗಳು ಮತ್ತು ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಕುಟುಂಬಸ್ಥರ ಜೊತೆ ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ತಮ್ಮ ಪತ್ನಿ, ಪುತ್ರ, ಅಳಿಯ ಹಾಗೂ ಶಾಸಕ ಆಪ್ತ ಡಾ ಹೆಚ್ ರಂಗನಾಥ್ ಜೊತೆ ಆಗಮಿಸಿದ ಅವರು, ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ದೊರೆತ ರಾಜಕೀಯ ಜಯದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಡಿ ಕೆ ಶಿವಕುಮಾರ್ ಅವರು ಮುಂಜಾನೆ ನಡೆಯುವ ದೇವಾಲಯದ ಸೇವೆಗಳು ಮತ್ತು ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು. ಅವರು ಮಹಾದ್ವಾರಂ ತಲುಪಿದ ವೇಳೆ, ತಿರುಮಲ ತಿರುಪತಿ ದೇವಸ್ಥಾನ (TTD) ಅಧಿಕಾರಿಗಳು ಹಾಗೂ ಅರ್ಚಕರು ಅವರಿಗೆ ಅಧಿಕೃತವಾಗಿ ಸ್ವಾಗತ ಕೋರಿದರು.

ರಂಗನಾಯಕುಲ ಮಂಟಪದಲ್ಲಿ ವೇದ ಪಂಡಿತರು ಅವರಿಗೆ ವೇದಾಶೀರ್ವಚನ, ಶೇಷವಸ್ತ್ರ ಮತ್ತು ತೀರ್ಥ ಪ್ರಸಾದವನ್ನು ನೀಡಿದರು. ಡಿ ಕೆ ಶಿವಕುಮಾರ್ ಅವರು ಮೊದಲು ರೆನಿಗುಂಟಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಡಾ ವಿ ವೆಂಕಟೇಶ್ವರ ಹಾಗೂ ಬೊಜ್ಜಲ ಸುಧೀರ್ ರೆಡ್ಡಿ ಸೇರಿದಂತೆ ಸ್ಥಳೀಯ ಗಣ್ಯರು ಅವರನ್ನು ಸ್ವಾಗತಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!