ದೇಶ

ಉತ್ತರಪ್ರದೇಶ: ಲಖನೌ ಕೋಚಿಂಗ್ ಸೆಂಟರ್ ಅಗ್ನಿ ಅವಘಡ; ವಿದ್ಯಾರ್ಥಿಗಳ ಸಾವಿನ ಸಂಖ್ಯೆ 15ಕ್ಕೆ ಏರಿಕೆ, 5 ಮಂದಿಗೆ ಗಂಭೀರ ಗಾಯ!

ಲಖನೌದ ಅಲಿಗಂಜ್ ಪೊಲೀಸ್ ಠಾಣೆ ಪ್ರದೇಶದ ಪುರಾಣಿ ಪ್ರದೇಶದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು 15 ಮಂದಿ ಸಜೀವ ದಹನವಾಗಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ.

ಲಖನೌದ ಅಲಿಗಂಜ್ ಪೊಲೀಸ್ ಠಾಣೆ ಪ್ರದೇಶದ ಪುರಾಣಿ ಪ್ರದೇಶದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಭಾರಿ ಬೆಂಕಿ ಕಾಣಿಸಿಕೊಂಡಿದ್ದು 15 ಮಂದಿ ಸಜೀವ ದಹನವಾಗಿದ್ದು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಪ್ರಾಣವನ್ನು ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಜಿಗಿದಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಥಳೀಯ ನಿವಾಸಿಗಳು ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ಪ್ರಾರಂಭಿಸಿದರು. ಸಿಕ್ಕಿಬಿದ್ದವರನ್ನು ಸ್ಥಳಾಂತರಿಸುವಲ್ಲಿ ಆಡಳಿತಕ್ಕೆ ಸಹಾಯ ಮಾಡಿದರು. ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ಆಗಮಿಸಿದ್ದು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ.

ಘಟನೆಯ ಪ್ರತ್ಯಕ್ಷದರ್ಶಿ ಅಮನ್, ಇಲ್ಲಿ ಗೇಮಿಂಗ್ ಅಥವಾ ಕಂಪ್ಯೂಟರ್ ಕೋಚಿಂಗ್ ಸೆಂಟರ್ ಇತ್ತು. ನಾವು ಬಂದಾಗ ಕಟ್ಟಡದಿಂದ ಹೊಗೆ ಬರುತ್ತಿತ್ತು. ನಾವು 5-6 ಜನರನ್ನು ರಕ್ಷಿಸಿದೆವು. ಬೆಂಕಿ ಹೊತ್ತಿಕೊಂಡ ನಂತರ, ಒಬ್ಬ ವ್ಯಕ್ತಿ ಕಟ್ಟಡದಿಂದ ಹಾರಿದ್ದು ಗಂಭೀರವಾಗಿ ಗಾಯಗೊಂಡರು. ಕೆಲವರು ಇನ್ನೂ ಒಳಗೆ ಸಿಲುಕಿಕೊಂಡಿದ್ದಾರೆ ಎಂದು ಹೇಳಿದರು.

ಲಖನೌದಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತಕ್ಷಣ ತಲುಪಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ತಕ್ಷಣ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆಯೂ ಅವರು ಸೂಚಿಸಿದ್ದಾರೆ. ಎಲ್ಲಾ ಹಂತಗಳಲ್ಲಿ ಜಾಗರೂಕತೆಯನ್ನು ಕಾಯ್ದುಕೊಳ್ಳಲು ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮುಖ್ಯಮಂತ್ರಿಗಳು ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಪರಿಸ್ಥಿತಿಯ ಮೇಲೆ ನಿಗಾ ಇಡಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ