ಡಾ. ಪ್ರಭಾಕರ್ ಕೋರೆ ಮತ್ತಿತರರು ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಪಡೆದರು 
ದೇಶ

ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ!

ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ.

ನವದೆಹಲಿ: ಶಿಕ್ಷಣ ತಜ್ಞ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಅತ್ಯಾಧುನಿಕ ಉಚಿತ, ಕಡಿಮೆ ವೆಚ್ಚದ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಪ್ರಭಾಕರ್ ಕೋರೆ, ಡಾ. ಸುರೇಶ್ ಹನಗವಾಡಿ, ಶಶಿ ಶೇಖರ್ ವೇಂಪತಿ, ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಮತ್ತು ಉದ್ಯಮಿ ಟಿ.ಟಿ. ಜಗನ್ನಾಥನ್ ಅವರಿಗೆ ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ.

ಶಶಿ ಶೇಖರ್ ವೇಂಪತಿ ಕೋವಿಡ್ ಸಮಯದಲ್ಲಿ ದೂರದರ್ಶನ ಮತ್ತು ಆಕಾಶವಾಣಿಯನ್ನು ಸಂಪೂರ್ಣವಾಗಿ ನವೀಕರಿಸಿ, ‘ರಾಮಾಯಣ’ ಪ್ರಸಾರದ ಮೂಲಕ ಜಾಗತಿಕ ದಾಖಲೆ ಬರೆದ ಹಾಗೂ ಕೋಟ್ಯಂತರ ವಿದ್ಯಾರ್ಥಿಗಳಿಗೆ ಉಚಿತ ಟಿವಿ ಶಿಕ್ಷಣ ತಲುಪಿಸಿದ ತಂತ್ರಜ್ಞರಾಗಿದ್ದಾರೆ. ಇವರು ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಿಂದ ಪದ್ಮಶ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

ಇನ್ನೂ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿರುವ ‘ದೃಷ್ಟಿ’ ವ್ಯವಸ್ಥೆಯನ್ನು ಆವಿಷ್ಕರಿಸಿ, ‘ಅಗ್ನಿ’ ಕ್ಷಿಪಣಿಯ ತಾಂತ್ರಿಕ ದೋಷ ನಿವಾರಿಸಿ ಭಾರತೀಯ ರಕ್ಷಣಾ ವಲಯವನ್ನು ಸ್ವಾವಲಂಬಿಯಾಗಿಸಿದ ವಿಜ್ಞಾನಿಯಾಗಿದ್ದಾರೆ.

ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಉದ್ಯಮವಾಗಿ ಬೆಳೆಸಿ, ಕುಕ್ಕರ್ ಅಪಘಾತ ತಡೆಯುವ ಆವಿಷ್ಕಾರದ ಪೇಟೆಂಟ್ ಹಕ್ಕನ್ನು ದೇಶದ ಜನರ ಜೀವ ರಕ್ಷಣೆಗಾಗಿ ಇಡೀ ಉದ್ಯಮಕ್ಕೆ ಉಚಿತವಾಗಿ ಬಿಟ್ಟುಕೊಟ್ಟ ಉದ್ಯಮಿ ಟಿ.ಟಿ. ಜಗನ್ನಾಥನ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!

ಅಮೆರಿಕ- ಇರಾನ್ ಶಾಂತಿ ಒಪ್ಪಂದ: ಜೂನ್ 17 ರಿಂದ ಹಾರ್ಮುಜ್ ಜಲಸಂಧಿ ದಾಟಿದ ಭಾರತದ 11 ಹಡಗುಗಳು! ಇನ್ನೂ ಎಷ್ಟಿವೆ ಗೊತ್ತಾ?

ಬೆಂಗಳೂರು ಮೂಲದ CRED ನಲ್ಲಿ Meta ಹೂಡಿಕೆ: ವಾಟ್ಸಾಪ್ ನ ಜಾಗತಿಕ ಮುಖ್ಯಸ್ಥರಾಗಿ ಶಾ ನೇಮಕಕ್ಕೆ ಕಾರಣಗಳೇನು?PhonePe, GooglePayಗೆ ಬೀಳುತ್ತಾ ಹೊಡೆತ?

ಮುಖ್ಯಮಂತ್ರಿ ಸಿ. ವಿಜಯ್ ಹುಟ್ಟುಹಬ್ಬ: ಎಲ್ಲಾ ವದಂತಿಗಳಿಗೆ ತೆರೆ ಎಳೆದ ಆಪ್ತ ಗೆಳತಿ ತ್ರಿಶಾ ಕೃಷ್ಣನ್!

ಉದ್ಧವ್ ಸೇನೆ ತೊರೆದು ಶಿಂಧೆ ಸೇನೆ ಸೇರಿದ ಬಂಡಾಯ ಸಂಸದರಿಗೆ ಬಂಪರ್ ಗಿಫ್ಟ್; ಅಭಿವೃದ್ಧಿ ಹಣ ಬಿಡುಗಡೆ