ಮೊಬೈಲ್ ಟವರ್ ಏರಿದ 17ರ ಹುಡುಗಿ 
ದೇಶ

ಪ್ರಿಯಕರನ ಬಿಡುಗಡೆಗಾಗಿ ಬಾಲಕಿ ಹೈ-ಡ್ರಾಮಾ: ಮೊಬೈಲ್ ಟವರ್ ಏರಿದ 17ರ ಹುಡುಗಿ!

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಅಪ್ರಾಪ್ತ ಬಾಲಕಿಯ ಪ್ರಿಯಕರನನ್ನು ಎರಡು ದಿನಗಳ ಹಿಂದೆ, ಅಪಹರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಬೊಕಾರೊ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮಂಗಳವಾರ 17 ವರ್ಷದ ಬಾಲಕಿಯೊಬ್ಬಳು 100 ಅಡಿ ಎತ್ತರದ ಮೊಬೈಲ್ ಟವರ್ ಹತ್ತಿ ತನ್ನ 22 ವರ್ಷದ ಗೆಳೆಯನನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಅಪ್ರಾಪ್ತ ಬಾಲಕಿಯ ಪ್ರಿಯಕರನನ್ನು ಎರಡು ದಿನಗಳ ಹಿಂದೆ, ಆಕೆಯನ್ನು ಅಪಹರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

"ಆದರೆ ಹುಡುಗಿ ಇಂದು ಬೆಳಗ್ಗೆ ಗೋಮಿಯಾದ ಧೆಂಧೆ ಗ್ರಾಮದಲ್ಲಿರುವ ಮೊಬೈಲ್ ಟವರ್ ಹತ್ತಿದ್ದಾಳೆ ಮತ್ತು ತನ್ನ ಬೇಡಿಕೆ ಈಡೇರಿಸದಿದ್ದರೆ ಮೇಲಿನಿಂದ ಹಾರುವುದಾಗಿ ಬೆದರಿಕೆ ಹಾಕುತ್ತಿದ್ದಾಳೆ. ಬಾಲಕಿ ಪಕ್ಕದ ಲಾಲ್‌ಪಾನಿಯಾ ಪ್ರದೇಶದವಳು" ಎಂದು ಗೋಮಿಯಾ ಪೊಲೀಸ್ ಠಾಣಾಧಿಕಾರಿ ಪ್ರಫುಲ್ ಕುಮಾರ್ ಮಹ್ತೊ ಅವರು ಪಿಟಿಐಗೆ ತಿಳಿಸಿದ್ದಾರೆ.

ಬಾಲಕಿಯನ್ನು ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಬಾಲಕಿಯ ತಾಯಿ ಜೂನ್ 18 ರಂದು ತನ್ನ ಮಗಳನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು, ಬಾಲಕಿ ಮತ್ತು ಆಕೆಯ ಪ್ರೇಮಿಯನ್ನು ರಾಂಚಿಯ ಸುಖ್‌ದೇವ್ ನಗರದಲ್ಲಿ ಪತ್ತೆಹಚ್ಚಲಾಯಿತು ಮತ್ತು ಹುಡುಗಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಲಾಯಿತು ಎಂದು ಲಾಲ್‌ಪಾನಿಯಾ ಪೊಲೀಸ್ ಠಾಣಾಧಿಕಾರಿ ಜೈಪ್ರಕಾಶ್ ಎಕ್ಕಾ ತಿಳಿಸಿದ್ದಾರೆ.

ರಾಂಚಿಯ ಮೂಲದ ಆ ವ್ಯಕ್ತಿ ಪ್ರಸ್ತುತ ತೆನುಘಾಟ್ ಜೈಲಿನಲ್ಲಿದ್ದಾನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!