ರಾಮ ಮಂದಿರ  
ದೇಶ

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

ಅಯೋಧ್ಯೆ ರಾಮ ಮಂದಿರಕ್ಕೆ ನೀಡಲಾದ ದೇಣಿಗೆಯ ಹಣ ಮತ್ತು ಕಾಣಿಕೆ ದುರುಪಯೋಗ ಆರೋಪವನ್ನು ವಿರೋಧ ಪಕ್ಷಗಳು ತಮ್ಮ ಪ್ರಚಾರದ ಪ್ರಮುಖ ವಿಷಯವಾಗಿ ಇಟ್ಟುಕೊಂಡು ಬಿಜೆಪಿ ವಿರುದ್ಧ ಮುಗಿಬಿದ್ದಿವೆ.

ಅಯೋಧ್ಯೆ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಂತೆಯೇ ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ವಿವಾದ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅಯೋಧ್ಯೆ ರಾಮ ಮಂದಿರಕ್ಕೆ ನೀಡಲಾದ ದೇಣಿಗೆಯ ಹಣ ಮತ್ತು ಕಾಣಿಕೆ ದುರುಪಯೋಗ ಆರೋಪವನ್ನು ವಿರೋಧ ಪಕ್ಷಗಳು ತಮ್ಮ ಪ್ರಚಾರದ ಪ್ರಮುಖ ವಿಷಯವಾಗಿ ಇಟ್ಟುಕೊಂಡು ಬಿಜೆಪಿ ವಿರುದ್ಧ ಮುಗಿಬಿದ್ದಿವೆ.

ಈ ಆರೋಪಗಳ ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ನೀಡಿದ ದೂರಿನ ಮೇರೆಗೆ ಅಯೋಧ್ಯೆ ರಾಮ ಮಂದಿರದಲ್ಲಿ ಕಾಣಿಕೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರ ಟಿನ್ನು ಯಾದವ್ ಸೇರಿದಂತೆ ಎಂಟು ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಟಿನ್ನು ಯಾದವ್ ಅವರನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ. ಕೃಷ್ಣ ಮೋಹನ್ ನೀಡಿದ ದೂರಿನ ಮೇರೆಗೆ BNS ಕಾಯ್ದೆಯ ಸೆಕ್ಷನ್ 306, 316, 317, ಮತ್ತು 61ರ ಅಡಿಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ಎಫ್ ಐಆರ್ ನಲ್ಲಿ ಯಾವುದೇ ಪ್ರಮುಖ ವ್ಯಕ್ತಿಗಳನ್ನು ಹೆಸರಿಸಿಲ್ಲ. ಬಂಧಿತರಲ್ಲಿ ಆರು ಮಂದಿ ಕ್ಯಾಷಿಯರ್ ಆಗಿದ್ದಾರೆ. ಎಸ್ ಐಟಿ ತನಿಖಾ ವರದಿ ನಂತರ ಸಲ್ಲಿಕೆ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಟಿನ್ನು ಯಾದವ್ ಮತ್ತು ಅಂಕುಲ್ ಮಿಶ್ರಾ ವಿರುದ್ಧ ವಂಚನೆ, ಕ್ರಿಮಿನಲ್ ಪಿತೂರಿ ಆರೋಪದಲ್ಲಿ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಚರ್ಚೆಗೆ ಅಮಿತ್ ಶಾ ಉತ್ತರಿಸುತ್ತಾರೆ, ಆದರೆ...: ಕಿರಣ್ ರಿಜಿಜು

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ