ಒಂದೇ ವಿಮಾನದಲ್ಲಿ ಫಡ್ನವೀಸ್, ಉದ್ಧವ್ ಠಾಕ್ರೆ 
ದೇಶ

One Flight, Handshake: ಒಂದೇ ವಿಮಾನದಲ್ಲಿ ಫಡ್ನವೀಸ್, ಉದ್ಧವ್ ಠಾಕ್ರೆ! ಮುಂದೆ ಏನಾಯಿತು? ಈ Video ವೀಕ್ಷಿಸಿ...

ಫಡ್ನವೀಸ್ ಪೂರ್ವ ನಿಗದಿತ ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳಿಗಾಗಿ ತಮ್ಮ ತವರು ನಾಗ್ಪುರಕ್ಕೆ ಪ್ರಯಾಣಿಸುತ್ತಿದ್ದರು.

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಮುಂಬೈನಿಂದ ನಾಗ್ಪುರಕ್ಕೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ರಾಜಕೀಯ ಎದುರಾಳಿಗಳು ಪ್ರಯಾಣದ ವೇಳೆ ಪರಸ್ಪರ ಹಸ್ತಲಾಘವ ಮಾಡಿ ಶುಭಾಶಯ ಕೋರಿದ್ದಾರೆ.

ಉಭಯ ನಾಯಕರ ನಡುವೆ ಕಿರು ಸಂವಾದವೂ ನಡೆದಿದೆ. ಈ ಪೋಟೋಗಳು ಶೀಘ್ರದಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಊಹಾಪೋಹಗಳಿಗೂ ಕಾರಣವಾಯಿತು. ಆದಾಗ್ಯೂ, ಇದೊಂದು ಸೌಜನ್ಯಯುತ ನಡವಳಿಕೆ ಎಂದು ಉಭಯ ಬಣಗಳು ಹೇಳಿಕೊಂಡಿವೆ.

ಫಡ್ನವೀಸ್ ಪೂರ್ವ ನಿಗದಿತ ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳಿಗಾಗಿ ತಮ್ಮ ತವರು ನಾಗ್ಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ಮಧ್ಯೆ ಠಾಕ್ರೆ ವಿದರ್ಭ ಮತ್ತು ಮರಾಠವಾಡದ ಮೂರು ದಿನಗಳ ಪ್ರವಾಸವನ್ನು ಪ್ರಾರಂಭಿಸಲು ನಾಗ್ಪುರಕ್ಕೆ ಆಗಮಿಸುತ್ತಿದ್ದರು ಎನ್ನಲಾಗಿದೆ.

ಮಹಾರಾಷ್ಟ್ರ ರಾಜಕೀಯದಲ್ಲಿ, ಸಾಮಾನ್ಯ ವಿಮಾನ ಪ್ರಯಾಣ ಕೂಡ ಚರ್ಚಾಸ್ಪದ ವಿಷಯವಾಗಬಹುದು. ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ ಮತ್ತು ಶಿವಸೇನೆ (ಯುಬಿಟಿ) ಶತ್ರುಗಳಂತೆ ಕಾದಾಡುತ್ತಿರುವುದರಿಂದ ಫಡ್ನವೀಸ್ ಮತ್ತು ಠಾಕ್ರೆ ನಡುವಿನ ಸರಳ ಹಸ್ತಲಾಘವ ಹೊಸ ಸುತ್ತಿನ ರಾಜಕೀಯ ಊಹಾಪೋಹಗಳಿಗೆ ನಾಂದಿ ಹಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!