ಕೇತನ್ ಅಗರ್ವಾಲ್ ಮತ್ತು ಸಿಯಾ ಗೋಯಲ್ 
ದೇಶ

Ketan Agarwal Murder: ತಪ್ಪಿತಸ್ಥಳಾಗಿದ್ದರೆ ಕೇತನ್ ಬಿದ್ದ ಕೋಟೆಯಿಂದಲೇ ಆಕೆಯನ್ನೂ ತಳ್ಳಿ'; ಮೊದಲ ಬಾರಿಗೆ ಮೌನ ಮುರಿದ ಸಿಯಾ ತಂದೆ..!

ಕೇತನ್ ನಮ್ಮ ಮನೆಯ ಮಗನಂತೆಯೇ ಆಗಿದ್ದ. ಅವರ ಮೇಲೆ ನಮಗೆ ಅಪಾರ ಪ್ರೀತಿ ಇತ್ತು. ಒಳ್ಳೆಯ ಗುಣದ, ಉತ್ತಮ ಭವಿಷ್ಯ ಹೊಂದಿದ್ದ ಯುವಕನನ್ನು ಕಳೆದುಕೊಂಡಿದ್ದೇವೆ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಮದುವೆಯನ್ನು ಉದಯಪುರದಲ್ಲಿ ಅದ್ಧೂರಿಯಾಗಿ ನಡೆಸುವ ಕನಸು ಕಂಡಿದ್ದೆವು.

ಪುಣೆ: ಪುಣೆಯ ಲೋಹಗಢ ಕೋಟೆಯಲ್ಲಿ ನಡೆದ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಿಯಾ ಗೋಯಲ್ ಅವರ ಕುಟುಂಬ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ.

ಕೇತನ್ ಸಾವಿಗೆ ತೀವ್ರ ದುಃಖ ವ್ಯಕ್ತಪಡಿಸಿದ ಸಿಯಾ ತಂದೆ, "ನನ್ನ ಮಗಳೇ ತಪ್ಪಿತಸ್ಥಳಾಗಿದ್ದರೂ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು" ಎಂದು ಆಗ್ರಹಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಸಿಯಾ ತಂದೆ ಪ್ರವೀಣ್ ಗೋಯಲ್, "ಇದು ಅತ್ಯಂತ ದುಃಖಕರ ಘಟನೆ. ನಡೆದಿರುವುದನ್ನು ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ಕೇತನ್ ಅವರ ಕುಟುಂಬ ತನ್ನ ಮಗನನ್ನು ಕಳೆದುಕೊಂಡಿದೆ. ಆದರೆ, ನಮಗೂ ನಮ್ಮ ಮಗನನ್ನೇ ಕಳೆದುಕೊಂಡಂತಾಗಿದೆ" ಎಂದು ಭಾವುಕರಾದರು.

"ಕೇತನ್ ನಮ್ಮ ಮನೆಯ ಮಗನಂತೆಯೇ ಆಗಿದ್ದ. ಅವರ ಮೇಲೆ ನಮಗೆ ಅಪಾರ ಪ್ರೀತಿ ಇತ್ತು. ಒಳ್ಳೆಯ ಗುಣದ, ಉತ್ತಮ ಭವಿಷ್ಯ ಹೊಂದಿದ್ದ ಯುವಕನನ್ನು ಕಳೆದುಕೊಂಡಿದ್ದೇವೆ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಅವರ ಮದುವೆಯನ್ನು ಉದಯಪುರದಲ್ಲಿ ಅದ್ಧೂರಿಯಾಗಿ ನಡೆಸುವ ಕನಸು ಕಂಡಿದ್ದೆವು. ಈಗ ಆ ಕನಸು ನುಚ್ಚುನೂರಾಗಿದೆ" ಎಂದು ಕಣ್ಣೀರಿಟ್ಟಿದ್ದಾರೆ.

ಸಿಯಾ ಮತ್ತು ಕೇತನ್ ಅವರ ಸಂಬಂಧದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. "ಸಿಯಾ ಎಂದಿಗೂ ಈ ಮದುವೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ನಿಶ್ಚಿತಾರ್ಥವಾದ ದಿನದಿಂದಲೂ ಆಕೆ ಸಂತೋಷವಾಗಿಯೇ ಇದ್ದಳು. ಯಾವಾಗಲೂ ಕೇತನ್ ಬಗ್ಗೆಯೇ ಮಾತನಾಡುತ್ತಿದ್ದಳು. ಕೇತನ್ ಅವರ ಪೋಷಕರು ಸಮಸ್ಯೆ ಇದೆ ಎಂದು ನಮಗೆ ಸೂಚನೆ ನೀಡಿದ್ದರೆ, ನಾವು ಕೂಡಲೇ ಮಾತನಾಡಿ ಅದನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೆವು" ಎಂದು ಹೇಳಿದ್ದಾರೆ.

ಇದೇ ವೇಳೆ ಕೇತನ್ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ ಅವರು, "ಕೊಲೆ ಮಾಡಿದವರಿಗೆ ಅತ್ಯಂತ ಕಠಿಣ ಶಿಕ್ಷೆ ಆಗಬೇಕು. ಕೇತನ್ ಬಿದ್ದ ಅದೇ ಕೋಟೆಯಿಂದ ತಪ್ಪಿತಸ್ಥರನ್ನು ತಳ್ಳಬೇಕು, ಅದು ನನ್ನ ಮಗಳೇ ಆಗಿದ್ದರೂ ಸಹ, ಕೆಳಗೆ ತಳ್ಳಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಹಗಢ ಕೋಟೆಯಲ್ಲಿ ನಡೆದ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಸಿಯಾ ಗೋಯಲ್ ಹಾಗೂ ಆಕೆಯ ಸ್ನೇಹಿತ ಚೇತನ್ ಚೌಧರಿ ಅವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!