ಅಯೋಧ್ಯೆ ರಾಮ ಮಂದಿರ  
ದೇಶ

ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: SIT ತನಿಖೆ ವಿರುದ್ಧ ಅಯೋಧ್ಯೆ ಅರ್ಚಕರು ಆಕ್ರೋಶ; ಸಿಎಂ ಯೋಗಿಗೆ ಹೇಳಿದ್ದೇನು?

ಎಸ್‌ಐಟಿ ಈಗ ಅಧಿಕೃತವಾಗಿ ಎಫ್ಐಆರ್ ದಾಖಲಿಸುವ ಮೂಲಕ ಆರೋಪಿಗಳನ್ನು ಹೆಸರಿಸಿದೆ.

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಗುರುವಾರ ಎಫ್‌ಐಆರ್ ದಾಖಲಿಸಿದ್ದು, ಈ ಬಗ್ಗೆ ಶುಕ್ರವಾರ ಅಯೋಧ್ಯೆಯ ಆಧ್ಯಾತ್ಮಿಕ ಸಮುದಾಯದಿಂದ ತೀವ್ರ ಪ್ರತಿಕ್ರಿಯೆ ಹುಟ್ಟುಹಾಕಿದೆ.

ಎಸ್‌ಐಟಿ ಈಗ ಅಧಿಕೃತವಾಗಿ ಎಫ್ಐಆರ್ ದಾಖಲಿಸುವ ಮೂಲಕ ಆರೋಪಿಗಳನ್ನು ಹೆಸರಿಸಿದೆ. ಈ ಬಗ್ಗೆ ANI ಜೊತೆ ಮಾತನಾಡಿದ ಅಯೋಧ್ಯೆಯ ಸ್ಥಳೀಯ ಪುರೋಹಿತರು, ಲಕ್ಷಾಂತರ ಜನರ ನಂಬಿಕೆಗೆ ದ್ರೋಹ ಬಗೆದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಾಮೂಹಿಕವಾಗಿ ಒತ್ತಾಯಿಸಿದರು.

ವಿಶೇಷ ತನಿಖಾ ತಂಡ(SIT) ತನಿಖಾ ಕಾನೂನು ಪ್ರಗತಿಯನ್ನು ಒಪ್ಪಿಕೊಂಡರೂ, ಕೆಲವು ಅರ್ಚಕರು ಇನ್ನೂ ಹೆಚ್ಚು ಪರಿಣಾಮಕಾರಿ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳಲು ತ್ವರಿತ, ಪಾರದರ್ಶಕ ಹಾಗೂ ಇತರರಿಗೆ ಮಾದರಿಯಾಗುವಂತಹ ತೀರ್ಮಾನಕ್ಕೆ ಕರೆ ನೀಡುತ್ತಿದ್ದಾರೆ.

ತನಿಖೆಯ ಪ್ರಸ್ತುತ ವ್ಯಾಪ್ತಿಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಆಧ್ಯಾತ್ಮಿಕ ವಾಗ್ಮಿ ಕರ್ಪಾತ್ರಿ ಮಹಾರಾಜ್, "ನಾನು SIT ತನಿಖೆಯಿಂದ ತೃಪ್ತನಾಗಿಲ್ಲ... ನಾನು ಸಿಎಂ ಯೋಗಿ ಆದಿತ್ಯನಾಥ್‌ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಹೇಳುತ್ತೇನೆ. ಅಂತಹ ಜನರ ವಿರುದ್ಧ FIR ದಾಖಲಿಸಬೇಕು ಮತ್ತು ಅವರನ್ನು ಅಯೋಧ್ಯೆಯಿಂದ ಹೊರಗಟ್ಟಬೇಕು" ಎಂದು ಆಗ್ರಹಿಸಿದರು.

"ಎಸ್‌ಐಟಿ ವರದಿ ಸಲ್ಲಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಎಂಟು ಜನರ ಹೆಸರಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಸಾಕೇತ್ ಭವನ ಪೀಠಾಧೀಶ್ವರ ಸೀತಾರಾಮ್ ದಾಸ್ ಜಿ ಮಹಾರಾಜ್ ಅವರು ಹೇಳಿದ್ದಾರೆ. ಅಲ್ಲದೆ ಈ ಪ್ರಕರಣವನ್ನು ಅತ್ಯಂತ ತುರ್ತಾಗಿ ಪರಿಗಣಿಸಬೇಕೆಂದು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

'Happy Birthday... Please Resign'; ಧರ್ಮೇಂದ್ರ ಪ್ರಧಾನ್‌ಗೆ ವಿನೂತನವಾಗಿ ಶುಭ ಹಾರೈಸಿದ Cockroach Janta Party

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ