ರಾಮ ಮಂದಿರ  
ದೇಶ

ಅಯೋಧ್ಯೆ: ರಾಮ ಮಂದಿರ ದೇಣಿಗೆ ಹಗರಣ, ಬಂಧಿತ 8 ಆರೋಪಿಗಳ ಮನೆ ಮೇಲೆ ಪೊಲೀಸರ ದಾಳಿ!

ಸ್ಥಳೀಯ ನ್ಯಾಯಾಧೀಶರ ಜೊತೆಗೂಡಿದ ಪೊಲೀಸ್ ತಂಡಗಳು, ಆರೋಪಿಗಳಾದ ಲವ ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ ಮತ್ತು ರಾಮಶಂಕರ್ ಯಾದವ್ ಸೇರಿದಂತೆ 8 ಆರೋಪಿಗಳ ಮನೆಗಳ ಮೇಲೆ ಶೋಧ ನಡೆಸಿವೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ: ಹಿಂದೂಗಳ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಎಂಟು ಆರೋಪಿಗಳ ಮನೆ ಮೇಲೆ ಪೊಲೀಸರು ಭಾನುವಾರ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಸ್ಥಳೀಯ ನ್ಯಾಯಾಧೀಶರ ಜೊತೆಗೂಡಿದ ಪೊಲೀಸ್ ತಂಡಗಳು, ಆರೋಪಿಗಳಾದ ಲವ ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ ಮತ್ತು ರಾಮಶಂಕರ್ ಯಾದವ್ ಸೇರಿದಂತೆ 8 ಆರೋಪಿಗಳ ಮನೆಗಳ ಮೇಲೆ ಶೋಧ ನಡೆಸಿವೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆಯ ನ್ಯಾಯಾಲಯ ಎಲ್ಲಾ ಎಂಟು ಆರೋಪಿಗಳನ್ನು ಜೂನ್ 29 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಎರಡು ದಿನಗಳ ನಂತರ ಈ ದಾಳಿ ನಡೆದಿದೆ. ಸೋಮವಾರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಪೊಲೀಸರು ಮತ್ತೆ ಕಸ್ಟಡಿಗೆ ಕೋರುವ ನಿರೀಕ್ಷೆಯಿದೆ.

ಎಂಟು ಆರೋಪಿಗಳಾದ ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವ ​​ಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮ್ ಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮಶಂಕರ್ ಅಲಿಯಾಸ್ ಟಿನ್ನು ಯಾದವ್ - ರಾಮ ಮಂದಿರದಲ್ಲಿ ದೇಣಿಗೆಯಾಗಿ ಸ್ವೀಕರಿಸಿದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ಎಣಿಸುವಲ್ಲಿ ಸಂಬಂಧ ಹೊಂದಿದ್ದರು.

ಪ್ರಾಸಿಕ್ಯೂಷನ್ ಪ್ರಕಾರ, ತನಿಖಾಧಿಕಾರಿಗಳು ಇಲ್ಲಿಯವರೆಗೆ 79.85 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್‌ಗಳ ಜೊತೆಗೆ, ಸೇವಕರಿಂದ ಕಳ್ಳತನ, ಕ್ರಿಮಿನಲ್ ನಂಬಿಕೆ ದ್ರೋಹ, ಕದ್ದ ಆಸ್ತಿಯನ್ನು ಪಡೆಯುವುದು ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!