ಚಂಪತ್ ರಾಯ್ 
ದೇಶ

ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ: ಟ್ರಸ್ಟ್ ನ ಮಾಜಿ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆ ದಾಖಲಿಸಿದ ಪೊಲೀಸರು!

ಚಂಪತ್ ರಾಯ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಂತೆ, ಅನಿಲ್ ಮಿಶ್ರಾ ಸೇರಿದಂತೆ ಇತರ ಹಿರಿಯ ಟ್ರಸ್ಟ್ ಪದಾಧಿಕಾರಿಗಳ ಹೇಳಿಕೆಗಳನ್ನು ನಂತರ ದಾಖಲಿಸಲಾಗುವುದು ಎಂದು ಮೂಲಗಳು ಬಹಿರಂಗಪಡಿಸಿವೆ.

ಅಯೋಧ್ಯೆ: ರಾಮ ಮಂದಿರ ದೇಣಿಗೆ ದುರುಪಯೋಗ ಆರೋಪ ಕುರಿತು ತನಿಖೆ ಮುಂದುವರೆಸಿರುವ ಅಯೋಧ್ಯೆ ಪೊಲೀಸರು ಸೋಮವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಂಪತ್ ರಾಯ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಂತೆ, ಅನಿಲ್ ಮಿಶ್ರಾ ಸೇರಿದಂತೆ ಇತರ ಹಿರಿಯ ಟ್ರಸ್ಟ್ ಪದಾಧಿಕಾರಿಗಳ ಹೇಳಿಕೆಗಳನ್ನು ನಂತರ ದಾಖಲಿಸಲಾಗುವುದು ಎಂದು ಮೂಲಗಳು ಬಹಿರಂಗಪಡಿಸಿವೆ.

ಆರೋಪಿಗಳಲ್ಲಿ ಒಬ್ಬರಾದ ಅವಿನಾಶ್ ಶುಕ್ಲಾ ಅವರ ಅಯೋಧ್ಯೆಯಲ್ಲಿರುವ ನಿವಾಸದ ಮೇಲೆ ಮೇಲೆ ಪೊಲೀಸರು ಭಾನುವಾರ ದಾಳಿ ನಡೆಸಿ, ಹಲವು ಮಹತ್ವದ ಮಾಹಿತಿ ಕಲೆಹಾಕಿದ್ದರು. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಪಿಯ ಸಹೋದರ ಅಭಿಷೇಕ್ ಶುಕ್ಲಾ, ದೇವಾಲಯದ ನಿಧಿಯ ದುರುಪಯೋಗದಲ್ಲಿ ಭಾಗಿಯಾಗಿರುವ ಯಾರನ್ನೂ ಕುಟುಂಬ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಮ ಮಂದಿರ ಕುರಿತು ಕಳೆದ ಕೆಲವು ದಿನಗಳಿಂದ ವರದಿಯಾದ ಘಟನೆಗಳಿಂದ ನಮಗೆ ಆಘಾತ, ನೋವು ಮತ್ತು ತೀವ್ರ ದುಃಖವಾಗಿದೆ. ನ್ಯಾಯಯುತ ತನಿಖೆಗಾಗಿ ಮತ್ತು ಭಕ್ತರಿಗೆ ಧೈರ್ಯ ತುಂಬಲು ನಾವು ಬದ್ಧರಾಗಿದ್ದೇವೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ (ಟ್ರಸ್ಟ್) ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ (ಟ್ರಸ್ಟ್) ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ರಾಜೀನಾಮೆಗಳನ್ನು ಸ್ವೀಕರಿಸಿರುವುದಾಗಿ ಟ್ರಸ್ಟ್ ಘೋಷಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ ಮಸೂದೆ: RSSಗೆ ಕಡಿವಾಣ? ಕಾಂಗ್ರೆಸ್ - ಬಿಜೆಪಿ ನಡುವೆ ವಾಕ್ಸಮರ!