ಅಯತೊಲ್ಲಾ ಅಲಿ ಖಮೇನಿ online desk
ದೇಶ

ಖಮೇನಿ ಅಂತ್ಯಕ್ರಿಯೆಗೆ ಹೋಗುತ್ತಿಲ್ಲ ಪ್ರಧಾನಿ ಮೋದಿ; ಆದ್ರೆ ಭಾರತದ ಪರವಾಗಿ ಇಬ್ಬರು ಭಾಗಿ!

ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.

ನವದೆಹಲಿ: ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಬರೋಬ್ಬರಿ 100 ದಿನದ ಬಳಿಕ ನಡೆಯುತ್ತಿದ್ದು, ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಆಹ್ವಾನ ನೀಡಿದ್ದರು. ಆದರೆ ಪ್ರಧಾನಿ ಮೋದಿ ಅವರು ಈ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ.

ಆದರೆ ಭಾರತದ ಪ್ರತಿನಿಧಿಗಳಾಗಿ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವರಾದ ಪಬಿತ್ರ ಮಾರ್ಗೆರಿಟಾ ಮತ್ತು ಬಿಹಾರ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೇನ್ ಅವರು ಖಮೇನಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.

ಮೂರು ದಶಕಗಳ ಕಾಲ ಇರಾನ್ ಅನ್ನು ಆಳಿದ ಖಮೇನಿ, ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನವೇ ಹತ್ಯೆಯಾಗಿದ್ದರು. ನಂತರ ಅಲಿ ಖಮೇನಿಯವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ಇರಾನ್ ಮುಂದಿನ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಕಳೆದ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಖಮೇನಿ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 5ರಿಂದ ಜುಲೈ 9ರ ವರೆಗೆ ಅಂತ್ಯಕ್ರಿಯೆಯ ವಿಧಿವಿಧಾನಗಳು ನಡೆಯಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ 1 ಕೋಟಿಗೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ.

ಜುಲೈ 5, 6 ಮತ್ತು 7 ರಂದು ಟೆಹ್ರಾನ್ ಹಾಗೂ ಕೋಮ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ವಿಧಿವಿಧಾನಗಳು ಜುಲೈ 9 ರಂದು ಮಶಾದ್ ನಗರದಲ್ಲಿ ನಡೆಯಲಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video