ಶಾಲಾ ಬಸ್‌ ಮೇಲೆ ಬಿದ್ದ ಬೃಹತ್‌ ಮರ 
ದೇಶ

Video ಮುಂಬೈನಲ್ಲಿ ಭಾರೀ ಮಳೆ: ಶಾಲಾ ಬಸ್‌ ಮೇಲೆ ಬಿದ್ದ ಬೃಹತ್‌ ಮರ; ಓರ್ವ ವಿದ್ಯಾರ್ಥಿ ಸಾವು, 10 ಮಂದಿಗೆ ಗಾಯ

ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿರುವ ಪ್ರಕಾರ, ಯೂನಿವರ್ಸಲ್ ಹೈಸ್ಕೂಲ್ ವ್ಯಾನ್ ನಲ್ಲಿ 15 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾಗ ಮರ ವಾಹನದ ಮೇಲೆ ಬಿದ್ದಿದೆ.

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಚೆಂಬೂರ್ ಪ್ರದೇಶದಲ್ಲಿ 18 ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್‌ ಮರ ಬಿದ್ದಿದ್ದು, ಘಟನೆಯಲ್ಲಿ 11 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಮತ್ತು 10 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಲವಾರು ವರದಿಗಳು ತಿಳಿಸಿವೆ.

ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿರುವ ಪ್ರಕಾರ, ಯೂನಿವರ್ಸಲ್ ಹೈಸ್ಕೂಲ್ ವ್ಯಾನ್ ನಲ್ಲಿ 15 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾಗ ಮರ ವಾಹನದ ಮೇಲೆ ಬಿದ್ದಿದೆ.

11 ವರ್ಷದ ವಿಹಾನ್ ಶ್ರೀವಾಸ್ತವ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ವರದಿ ಪ್ರಕಾರ, ಇಂದು ಮಧ್ಯಾಹ್ನ 2:50 ರ ಸುಮಾರಿಗೆ ತಿಲಕ್ ನಗರದ ಯೂನಿವರ್ಸಲ್ ಶಾಲೆಗೆ ಸೇರಿದ ಬಸ್ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ತಕ್ಷಣ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.

ಏತನ್ಮಧ್ಯೆ, ಮಹಾರಾಷ್ಟ್ರದಾದ್ಯಂತ ಮಳೆ ಹೆಚ್ಚಾಗಲಿದ್ದು, ಮುಂಬೈನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಪೂರ್ವ ಕರಾವಳಿಯಲ್ಲಿ ಸ್ವಲ್ಪ ಸಮಯ ಸ್ಥಗಿತಗೊಂಡಿದ್ದ ನೈಋತ್ಯ ಮಾನ್ಸೂನ್, ಕಳೆದ 24 ಗಂಟೆಗಳಲ್ಲಿ ಮತ್ತೆ ವೇಗ ಪಡೆದುಕೊಂಡಿದೆ ಎಂದು ವರದಿಯೊಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್