ಮಹಾಯುತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ ಸಚಿನ್ ಅಹೀರ್ ನಾಮಪತ್ರ ಸಲ್ಲಿಕೆ. 
ದೇಶ

ಉದ್ಧವ್ ಠಾಕ್ರೆಗೆ ಮತ್ತೊಂದು ಶಾಕ್; ಕೌನ್ಸಿಲ್ ಉಪ ಸಭಾಪತಿ ಸ್ಥಾನಕ್ಕೆ ಮಹಾಯುತಿಯಿಂದ ಸಚಿನ್ ಅಹಿರ್ ನಾಮಪತ್ರ ಸಲ್ಲಿಕೆ!

ಆರು ಸಂಸದರು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವನ್ನು ತೊರೆದು ಆಡಳಿತಾರೂಢ ಶಿವಸೇನೆಗೆ ಸೇರಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಮುಂಬೈ: ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಬೆಂಬಲಿಸಿ, ಹಿರಿಯ ನಾಯಕ ಸಚಿನ್ ಅಹಿರ್ ಅವರು ಮಹಾಯುತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಉಪ ಸಭಾಪತಿ ಸ್ಥಾನಕ್ಕೆ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)ಗೆ ಮತ್ತೊಂದು ಹಿನ್ನಡೆ ಉಂಟಾಗಿದೆ.

ಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಅವರ ಆಪ್ತ ಎಂದು ಪರಿಗಣಿಸಲಾದ ಅಹಿರ್, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ಆರು ಸಂಸದರು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವನ್ನು ತೊರೆದು ಆಡಳಿತಾರೂಢ ಶಿವಸೇನೆಗೆ ಸೇರಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಈ ಹುದ್ದೆಗೆ ವಿರೋಧ ಪಕ್ಷದ ಆಯ್ಕೆಯನ್ನು ದೃಢಪಡಿಸಿದ ಸೇನಾ (ಯುಬಿಟಿ) ನಾಯಕ ಅಂಬಾದಾಸ್ ದಾನ್ವೆ, ಎಂಎಲ್‌ಸಿ ಜಗನ್ನಾಥ್ ಅಭಯಂಕರ್ ಅವರು ಮಹಾ ವಿಕಾಸ್ ಅಘಾಡಿಯ ಅಭ್ಯರ್ಥಿ ಎಂದು ಹೇಳಿದರು.

ಅಹಿರ್ ಅವರ ಈ ನಡೆಯ ವಿಧಾನ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸಚಿವ ಮತ್ತು ಶಿವಸೇನಾ ನಾಯಕ ಉದಯ್ ಸಮಂತ್, 'ಸಚಿನ್ ಅಹಿರ್ ಒಬ್ಬ ಹಿರಿಯ ಎಂಎಲ್‌ಸಿ ಮತ್ತು ಅವರು ಮುಂಬೈ ಜನರ ಪರವಾಗಿ ಧ್ವನಿ ಎತ್ತಿದ್ದಾರೆ. ಅಂತಹ ಅನುಭವಿ ನಾಯಕ ಶಿವಸೇನೆಗೆ ಬರುತ್ತಿರುವುದು ನನಗೆ ಸಂತೋಷ ತಂದಿದೆ. ನಾವು ಎಲ್ಲ ಕಾನೂನು ಅಂಶಗಳನ್ನು ಪರಿಶೀಲಿಸಿದ್ದೇವೆ ಮತ್ತು ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ' ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸೇನಾ (ಯುಬಿಟಿ) ಶಾಸಕ ಸುನೀಲ್ ರಾವುತ್, 'ನಮಗೆ ಇಂತಹ ಅನೇಕ ಆಘಾತಗಳು ಎದುರಾಗಿವೆ. ಆದರೆ, ಪಕ್ಷವು ಎಂದಿಗೂ ಕುಗ್ಗಿಲ್ಲ. ಶಿವಸೇನೆ (ಯುಬಿಟಿ) ಗೆ ಈ ಆಘಾತ ದೊಡ್ಡದಲ್ಲ' ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್