ದೇಶ

ಮಹತ್ವದ ಪರಮಾಣು ಒಪ್ಪಂದಕ್ಕೆ ಭಾರತ-ಕೆನಡಾ ಸಹಿ: ಇದರಿಂದ ಭಾರತಕ್ಕೇನು ಲಾಭ?

"ಸಂಘರ್ಷ ಪೀಡಿತ ಪ್ರದೇಶದಲ್ಲಿ ಇರುವ ಎಲ್ಲಾ ಭಾರತೀಯ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ದೇಶಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು.

ನವದೆಹಲಿ: ಭಾರತ ಮತ್ತು ಕೆನಡಾ ಯುರೇನಿಯಂ ಪೂರೈಕೆ ಒಪ್ಪಂದ ಮತ್ತು ಸಮಗ್ರ ಆರ್ಥಿಕ ಪಾಲುದಾರಿಕೆಯನ್ನು ಅಂತಿಮಗೊಳಿಸಲು ತಮ್ಮ ಪಾಲುದಾರಿಕೆಯನ್ನು ಗಟ್ಟಿಗೊಳಿಸಿವೆ. ಇದು ಪ್ರಮುಖ ಜಾಗತಿಕ ವಿಷಯಗಳಲ್ಲಿ ಬಲವಾದ ಸಂಬಂಧಗಳು ಮತ್ತು ಸಹಕಾರದ ಸಂಕೇತವಾಗಿದೆ.

ಭಾರತ ಮತ್ತು ಕೆನಡಾ ಸೋಮವಾರ ಯುರೇನಿಯಂ ಪೂರೈಕೆ ಸಹಕಾರದ ಒಪ್ಪಂದಕ್ಕೆ ಸಹಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ನಡುವಿನ ಮಾತುಕತೆಗಳ ನಂತರ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲು ನಿರ್ಧರಿಸಲಾಗಿದೆ.

ಪಶ್ಚಿಮ ಏಷ್ಯಾದಲ್ಲಿನ ಅನಿಶ್ಚಿತ ಭದ್ರತಾ ಪರಿಸ್ಥಿತಿಯ ಬಗ್ಗೆಯೂ ಉಭಯ ನಾಯಕರು ಇದೇ ವೇಳೆ ಚರ್ಚಿಸಿದ್ದಾರೆ. ಭಾರತ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಎಲ್ಲಾ ಸಂಘರ್ಷಗಳ ಪರಿಹಾರವನ್ನು ಬೆಂಬಲಿಸುತ್ತದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು.

"ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಪರಿಸ್ಥಿತಿ ನಮಗೆ ಗಂಭೀರ ಕಳವಳಕಾರಿ ವಿಷಯವಾಗಿದೆ. ಭಾರತ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಎಲ್ಲಾ ವಿವಾದಗಳ ಪರಿಹಾರವನ್ನು ಬೆಂಬಲಿಸುತ್ತದೆ" ಎಂದು ಪ್ರಧಾನಿ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಸಂಘರ್ಷ ಪೀಡಿತ ಪ್ರದೇಶದಲ್ಲಿ ಇರುವ ಎಲ್ಲಾ ಭಾರತೀಯ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ದೇಶಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು.

ಕೆನಡಾದಿಂದ ಭಾರತಕ್ಕೆ ಯುರೇನಿಯಂ ಪೂರೈಕೆ

ಮೋದಿ-ಕಾರ್ನಿ ಮಾತುಕತೆಯ ನಂತರ, ನಿರ್ಣಾಯಕ ಖನಿಜ ವಲಯದಲ್ಲಿ ಸಹಕಾರಕ್ಕಾಗಿ ಹಲವಾರು ಒಪ್ಪಂದಗಳಿಗೆ ಸಹಿ ಹಾಕಲಾಯಿತು.

"ನಾಗರಿಕ ಪರಮಾಣು ಇಂಧನ ವಲಯದಲ್ಲಿ, ನಾವು ದೀರ್ಘಾವಧಿಯ ಯುರೇನಿಯಂ ಪೂರೈಕೆಗಾಗಿ ಒಪ್ಪಂದವನ್ನು ಮಾಡಿಕೊಂಡಿದ್ದೇವೆ. ಸಣ್ಣ ಮಾಡ್ಯುಲರ್ ರಿಯಾಕ್ಟರ್‌ಗಳು ಮತ್ತು ಸುಧಾರಿತ ರಿಯಾಕ್ಟರ್‌ಗಳ ಮೇಲೂ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ" ಎಂದು ಉಭಯ ನಾಯಕರು ತಿಳಿಸಿದ್ದಾರೆ.

ಒಪ್ಪಂದದ ಪ್ರಕಾರ, ಕೆನಡಾ ಭಾರತಕ್ಕೆ ಯುರೇನಿಯಂ ಪೂರೈಸಲಿದೆ. ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದ ನಿಯಮಗಳನ್ನು ಉಭಯ ನಾಯಕರೂ ದೃಢಪಡಿಸಿದ್ದಾರೆ.

ಭಾರತ ಮತ್ತು ಕೆನಡಾ ಪ್ರಜಾಪ್ರಭುತ್ವ ಮೌಲ್ಯಗಳಲ್ಲಿ ಅಚಲ ನಂಬಿಕೆಯನ್ನು ಹೊಂದಿವೆ. ಮಾನವೀಯತೆಯ ಯೋಗಕ್ಷೇಮವು ನಮ್ಮ ದೃಷ್ಟಿಕೋನವಾಗಿದೆ. ಈ ದೃಷ್ಟಿಕೋನವು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ" ಎಂದು ಮೋದಿ ಹೇಳಿದರು.

ಭಾರತ ಮತ್ತು ಕೆನಡಾ ರಕ್ಷಣಾ ಕೈಗಾರಿಕೆಗಳು ಮತ್ತು ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸಲು ಸಹ ಕೆಲಸ ಮಾಡುತ್ತವೆ ಎಂದು ಪ್ರಧಾನಿ ಹೇಳಿದರು.

ಭಯೋತ್ಪಾದನೆಯನ್ನು ಎದುರಿಸುವಲ್ಲಿ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳನ್ನು ಸಹ ಉಭಯ ನಾಯಕರು ಚರ್ಚಿಸಿದ್ದಾರೆ. "ಭಯೋತ್ಪಾದನೆ, ಉಗ್ರವಾದ ಎರಡೂ ದೇಶಗಳಿಗೆ ಮಾತ್ರವಲ್ಲದೆ ಎಲ್ಲಾ ಮಾನವೀಯತೆಗೆ ಗಂಭೀರ ಸವಾಲುಗಳಾಗಿವೆ" ಎಂದು ಮೋದಿ ಹೇಳಿದ್ದಾರೆ. "ಅವುಗಳ ವಿರುದ್ಧ ನಮ್ಮ ನಿಕಟ ಸಹಕಾರವು ಜಾಗತಿಕ ಶಾಂತಿ ಮತ್ತು ಸ್ಥಿರತೆಗೆ ಅತ್ಯಂತ ಮುಖ್ಯವಾಗಿದೆ" ಎಂದು ಅವರು ಹೇಳಿದರು.

ಕೆನಡಾ ಮತ್ತು ಭಾರತ ಭವಿಷ್ಯಕ್ಕಾಗಿ ತಮ್ಮದೇ ಆದ ಹಾದಿಯನ್ನು ರೂಪಿಸಿಕೊಳ್ಳುತ್ತಿವೆ, ಇದು ಹೊಸ ಮಹತ್ವಾಕಾಂಕ್ಷೆಗಳೊಂದಿಗೆ "ಮೌಲ್ಯಯುತ ಪಾಲುದಾರಿಕೆ"ಯ ವಿಸ್ತರಣೆಯಾಗಿದೆ ಎಂದು ಕಾರ್ನಿ ತಮ್ಮ ಹೇಳಿಕೆಯಲ್ಲಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!