ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯುತ್ತಿರುವುದು 
ದೇಶ

Iran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ; ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆ

ಅಮೆರಿಕಾ ಮತ್ತು ಇಸ್ರೇಲ್‌ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್‌ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ನವದೆಹಲಿ: ಮಧ್ಯ ಪ್ರಾಚ್ಯ ಪ್ರದೇಶದಲ್ಲಿ ಇಸ್ರೇಲ್-ಇರಾನ್ ಯುದ್ದರಿಂದ ಉಂಟಾಗಿರುವ ತೀವ್ರ ಸಂಘರ್ಷ ಮತ್ತು ಅಸ್ಥಿರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ರಾತ್ರಿ ಸಚಿವ ಸಂಪುಟದ ಭದ್ರತಾ ಸಮಿತಿ (CCS) ಸಭೆ ನಡೆಸಿ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿದರು.

ಅಮೆರಿಕಾ ಮತ್ತು ಇಸ್ರೇಲ್‌ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್‌ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ರಾಜಸ್ಥಾನ, ಗುಜರಾತ್, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳ ಎರಡು ದಿನಗಳ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ರಾತ್ರಿ ಸುಮಾರು 9.30ರ ವೇಳೆಗೆ ದೆಹಲಿಗೆ ಆಗಮಿಸಿದ ನಂತರ ಈ ಮಹತ್ವದ ಸಭೆ ನಡೆಸಿದರು.

ಸಿಸಿಎಸ್ ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹಾಜರಿದ್ದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಪ್ರಧಾನ ಕಾರ್ಯದರ್ಶಿಗಳು, ರಕ್ಷಣಾ ದಳಗಳ ಮುಖ್ಯಸ್ಥರು ಮತ್ತು ವಿದೇಶಾಂಗ ಕಾರ್ಯದರ್ಶಿಯೂ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮಧ್ಯ ಪ್ರಾಚ್ಯ ಪ್ರದೇಶದಲ್ಲಿರುವ ಭಾರತೀಯರ ಸುರಕ್ಷತೆ ಕುರಿತು ವಿಶೇಷ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಇರಾನ್‌ನಲ್ಲಿ ಸುಮಾರು 10,000, ಇಸ್ರೇಲ್‌ನಲ್ಲಿ 40,000ಕ್ಕೂ ಹೆಚ್ಚು ಹಾಗೂ ಪಶ್ಚಿಮ ಏಷ್ಯಾ ಮತ್ತು ಗಲ್ಫ್ ದೇಶಗಳಲ್ಲಿ ಒಟ್ಟಾರೆ ಸುಮಾರು 90 ಲಕ್ಷ ಭಾರತೀಯರು ನೆಲೆಸಿದ್ದಾರೆ.

ಉದ್ವಿಗ್ನತೆ ಹಿನ್ನೆಲೆಯಲ್ಲಿ ವಿಮಾನ ಸಂಚಾರ ವ್ಯತ್ಯಯಗೊಂಡಿದ್ದು, ದುಬೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ನೂರಾರು ಭಾರತೀಯರು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!

‘CEC ಜ್ಞಾನೇಶ್ ಕುಮಾರ್ ದೇಶದ್ರೋಹಿ’: ಮುಂಬೈನಲ್ಲಿ ಭುಗಿಲೆದ್ದ Cockroach Janata Party ಪ್ರತಿಭಟನೆ, ರಾಜೀನಾಮೆಗೆ ಬಿಗಿಪಟ್ಟು..!

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ Biggboss ಮಾಜಿ ಸ್ಪರ್ಧಿ ಜಾಹ್ನವಿ ನೇಮಕ!

Pakನ ಹೊಸ ನಾಟಕ: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಹತ್ಯೆಗೀಡಾದ SSG ಉಗ್ರ ಜೀವಂತವಾಗಿದ್ದಾನೆ ಎಂದ ಪಾಕ್ ಸೇನೆ