ಪ್ರಧಾನಿ ನರೇಂದ್ರ ಮೋದಿ online desk
ದೇಶ

ಯುದ್ಧದ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ ಸಂಘರ್ಷಗಳಿಗೆ "ತ್ವರಿತ ಅಂತ್ಯ" ಹಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದು, ಯಾವುದೇ ಸಮಸ್ಯೆಯನ್ನು ಸೇನಾ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ ನಡೆಸಿದ ನಂತರ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ.

"ಭಾರತ ಮತ್ತು ಫಿನ್ಲ್ಯಾಂಡ್ ಎರಡೂ ರಾಷ್ಟ್ರಗಳು ಕಾನೂನು, ದ್ವಿಪಕ್ಷಿಯ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ನಂಬುತ್ತವೆ. ಯಾವುದೇ ಸಮಸ್ಯೆಯನ್ನು ಮಿಲಿಟರಿ ಸಂಘರ್ಷದಿಂದ ಪರಿಹರಿಸಲು ಸಾಧ್ಯವಿಲ್ಲ ಎಂಬುದನ್ನು ನಾವು ಒಪ್ಪುತ್ತೇವೆ" ಎಂದು ಅವರು ಹೇಳಿದರು.

"ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾ ಆಗಿರಲಿ, ಸಂಘರ್ಷಗಳ ತ್ವರಿತ ಅಂತ್ಯ ಕಾಣಬೇಕು ಮತ್ತು ಶಾಂತಿಗಾಗಿ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುವುದನ್ನು ನಾವು ಮುಂದುವರಿಸುತ್ತೇವೆ" ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾತುಕತೆ ವೇಳೆ, ಭಾರತ-ಫಿನ್ಲ್ಯಾಂಡ್ ಸಂಬಂಧವನ್ನು ಡಿಜಿಟಲೀಕರಣ ಮತ್ತು ಸುಸ್ಥಿರತೆ ಕ್ಷೇತ್ರದಲ್ಲಿ ವ್ಯೂಹಾತ್ಮಕ ಪಾಲುದಾರಿಕೆಗೆ ಏರಿಸಲು ಉಭಯ ನಾಯಕರು ಒಪ್ಪಿಕೊಂಡರು. "AI ನಿಂದ 6G ಟೆಲಿಕಾಂ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್‌ವರೆಗಿನ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ" ಎಂದು ಅವರು ಹೇಳಿದರು.

ಭಾರತ ಮತ್ತು ಯುರೋಪಿಯನ್ ಯೂನಿಯನ್(ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದವು ಉಭಯ ದೇಶಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಮೋದಿ ಹೇಳಿದರು.

"ಈ ಒಪ್ಪಂದವು ಭಾರತ ಮತ್ತು ಫಿನ್‌ಲ್ಯಾಂಡ್ ನಡುವಿನ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET-UG 2026 ಪ್ರಶ್ನೆ ಪತ್ರಿಕೆ ಲೀಕ್ ಕಿಂಗ್ ಪಿನ್, ಪುಣೆಯ ಕೆಮಿಸ್ಟ್ರಿ 'ಲೆಕ್ಚರರ್' ಬಂಧಿಸಿದ ಸಿಬಿಐ!

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

IPL 2026: ನಿರ್ಣಾಯಕ ಹಂತದಲ್ಲಿ RCB ತಂಡ ಸೇರಿದ ಮತ್ತೊಬ್ಬ ಮಾರಕ ವೇಗಿ; ಬೆಂಗಳೂರು ತಂಡಕ್ಕೆ ಆನೆಬಲ

ಉದ್ಯೋಗವಿಲ್ಲದ ಕೆಲವರು ಜಿರಳೆಗಳ ರೀತಿ, ಮಾಧ್ಯಮ, ಕಾರ್ಯಕರ್ತರ ಸೋಗಿನಲ್ಲಿ ವ್ಯವಸ್ಥೆ ಮೇಲೆ ದಾಳಿ ಮಾಡ್ತಾರೆ: CJI ಸೂರ್ಯಕಾಂತ್

ಪ್ರಧಾನಿ ನರೇಂದ್ರ ಮೋದಿ ಬೆಂಗಾವಲು ಪಡೆಯಲ್ಲಿ 'ಸೂಪರ್ ಕಾರ್'ಗಳು, ವಿಶೇಷತೆ ಏನು?

SCROLL FOR NEXT