ಲೋಕಸಭೆ ಸ್ಪೀಕರ್ ಓಂ ಬಿರ್ಲಾ PTI
ದೇಶ

ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ: ಕಾಂಗ್ರೆಸ್ ಸಂಸದರಿಗೆ ವಿಪ್ ಜಾರಿ; ಕಡ್ಡಾಯ ಹಾಜರಿಗೆ ಸೂಚನೆ

ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಮೂರು ದಿನಗಳವರೆಗೆ ತನ್ನ ಸಂಸದರು ಕೆಳಮನೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ.

ನವದೆಹಲಿ: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿರುವ

ಕಾಂಗ್ರೆಸ್, ಈ ಸಂಬಂಧ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದೆ.

ಸ್ಪೀಕರ್ ಓಂ ಬಿರ್ಲಾರ ಅವರ ಪದಚ್ಯುತಿ ಕೋರಿ ಸಲ್ಲಿಸಲಾಗಿರುವ ನೋಟಿಸ್‌ ಮುಂದಿನ ವಾರ ಲೋಕಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್ ತನ್ನ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಮಾರ್ಚ್ 9 ರಿಂದ 11 ರವರೆಗೆ ಕಡ್ಡಾಯವಾಗಿ ಲೋಕಸಭೆಯಲ್ಲಿ ಹಾಜರಿರಬೇಕು ಎಂದು ಸೂಚಿಸಿದೆ.

ಮಾರ್ಚ್ 9 ರಂದು ಬಜೆಟ್ ಅಧಿವೇಶನದ ಎರಡನೇ ಹಂತ ಆರಂಭವಾಗಲಿದೆ.

ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಮೊದಲ ಮೂರು ದಿನಗಳವರೆಗೆ ತನ್ನ ಸಂಸದರು ಕೆಳಮನೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಕಾಂಗ್ರೆಸ್ ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸದನವು ಸರಳ ಬಹುಮತದಿಂದ ನಿರ್ಣಯವನ್ನು ಅಂಗೀಕರಿಸಿದರೆ ಸ್ಪೀಕರ್ ಅವರನ್ನು ಹುದ್ದೆಯಿಂದ ತೆಗೆದುಹಾಕಬಹುದು.

ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ಮತ್ತು ಮತದಾನ ನಡೆಯುವಾಗ ಓಂ ಬಿರ್ಲಾ ಅವರು ಸಭೆಯ ಅಧ್ಯಕ್ಷತೆ ವಹಿಸುವುದಿಲ್ಲ. ಬದಲಾಗಿ ಸದಸ್ಯರ ನಡುವೆ ಕುಳಿತುಕೊಳ್ಳಲಿದ್ದಾರೆ.

ಈ ನಿರ್ಣಯದ ಚರ್ಚೆಯ ವೇಳೆ ಬಿರ್ಲಾ ಅವರು ತಮ್ಮನ್ನು ತಾವು ಸಮರ್ಥಿಸಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಅಷ್ಟೆ ಅಲ್ಲದೇ ನಿರ್ಣಯದ ವಿರುದ್ಧ ಮತ ಚಲಾಯಿಸುವ ಹಕ್ಕನ್ನು ಸಹ ಹೊಂದಿರುತ್ತಾರೆ.

ಪ್ರಸ್ತಾವಿತ ಈ ನಿರ್ಣಯದ ಕುರಿತು ಸಾಮಾನ್ಯವಾಗಿ ಉಪ ಸ್ಪೀಕರ್ ಪರಿಶೀಲಿಸುತ್ತಾರೆ. ಆದರೆ ಪ್ರಸ್ತುತ ಲೋಕಸಭೆಯಲ್ಲಿ ಉಪ ಸ್ಪೀಕರ್ ಇಲ್ಲದಿರುವುದರಿಂದ, ಅಧ್ಯಕ್ಷರ ಸಮಿತಿಯ ಅತ್ಯಂತ ಹಿರಿಯ ಸದಸ್ಯರು ಅದನ್ನು ಪರಿಶೀಲಿಸಬಹುದು. ಸ್ಪೀಕರ್ ಅನುಪಸ್ಥಿತಿಯಲ್ಲಿ ಸದನವನ್ನು ನಡೆಸಲು ಈ ಸಮಿತಿ ಸಹಾಯ ಮಾಡುತ್ತದೆ.

ಬಜೆಟ್ ಅಧಿವೇಶನದ ಮೊದಲ ಹಂತದಲ್ಲಿ ಪ್ರಧಾನಿ ಮೋದಿಯವರ ಉತ್ತರವಿಲ್ಲದೆಯೇ ವಂದನಾ ನಿರ್ಣಯವನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿತ್ತು. ಈ ವೇಳೆ ಮಾತನಾಡಿದ್ದ ಸ್ಪೀಕರ್ ಓಂ ಬಿರ್ಲಾ, “ಕಾಂಗ್ರೆಸ್ ಸದಸ್ಯರು ಪ್ರಧಾನಿಯವರ ಆಸನದ ಬಳಿ ತೆರಳಿ ಅನಿರೀಕ್ಷಿತ ಕೃತ್ಯ ಎಸಗುವ ಬಗ್ಗೆ ಖಚಿತ ಮಾಹಿತಿ ಇತ್ತು. ಪ್ರಜಾಪ್ರಭುತ್ವದ ಸಂಪ್ರದಾಯಗಳಿಗೆ ಧಕ್ಕೆ ಬಾರದಿರಲಿ ಎಂದು ನಾನೇ ಪ್ರಧಾನಿಯವರನ್ನು ಸದನಕ್ಕೆ ಬರದಂತೆ ಕೋರಿದ್ದೆ” ಎಂಬ ಹೇಳಿಕೆ ನೀಡಿದ್ದರು.

​ಆದರೆ, ಈ ಆರೋಪವನ್ನು ತಳ್ಳಿಹಾಕಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ, “ಇದು ಹಸಿ ಸುಳ್ಳು. ಪ್ರಧಾನಿ ಮೋದಿ ಸ್ಪೀಕರ್ ಅವರ ಹಿಂದೆ ಅವಿತುಕೊಳ್ಳುತ್ತಿದ್ದಾರೆ,” ಎಂದು ತಿರುಗೇಟು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ