ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್‌: IMD ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ, ಕೆಲಕಾಲ ಆತಂಕ!

IMD ಕಚೇರಿಯ ಆರು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದ್ದು, ಅದು ಸ್ಫೋಟಗೊಳ್ಳುತ್ತದೆ ಎಂದು ಇಮೇಲ್ ನಲ್ಲಿ ಹೇಳಲಾಗಿತ್ತು.

ಹೈದರಾಬಾದ್: ಇಲ್ಲಿನ ಭಾರತೀಯ ಹವಾಮಾನ ಇಲಾಖೆ (IMD)ಕಚೇರಿಗೆ ಶುಕ್ರವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಶುಕ್ರವಾರ ಬೆಳಗ್ಗೆ 6.30ರ ಸುಮಾರಿಗೆ ಕಚೇರಿಯ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಬೆಳಗ್ಗೆ 9.30ರ ಸುಮಾರಿಗೆ ಇದನ್ನು ಗಮನಿಸಿದ ಕಚೇರಿ ಸಿಬ್ಬಂದಿ ಅದನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

IMD ಕಚೇರಿಯ ಆರು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದ್ದು, ಅದು ಸ್ಫೋಟಗೊಳ್ಳುತ್ತದೆ ಎಂದು ಇಮೇಲ್ ನಲ್ಲಿ ಹೇಳಲಾಗಿತ್ತು.

ಮಾಹಿತಿ ಪಡೆದು ಸಂಪೂರ್ಣ ತಪಾಸಣೆ ನಡೆಸಿದ ಬಳಿಕ ಇದೊಂದು ಹುಸಿಬಾಂಬ್ ಬೆದರಿಕೆ ಸಂದೇಶ ಎಂಬುದು ದೃಢಪಟ್ಟಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇ-ಮೇಲ್ ಸಂದೇಶ ಕಳುಹಿಸುವವರನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಇಲ್ಲಿನ ಸಿಬಿಐ ನ್ಯಾಯಾಲಯ ಮತ್ತು ತೆಲಂಗಾಣ ಹೈಕೋರ್ಟ್‌ಗೂ ಕಳೆದ ತಿಂಗಳು ಹುಸಿ ಬಾಂಬ್ ಬೆದರಿಕೆಗಳು ಬಂದಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

'ನಿಮಗೆ ಹೃದಯಾಘಾತವಾಗಬಹುದು': ಟ್ರಂಪ್ ಶಾಂತಿ ಯೋಜನೆಯನ್ನು ತಿರಸ್ಕರಿಸಿದ ಬೆನ್ನಲ್ಲೇ ಶಸ್ತ್ರಾಸ್ತ್ರ ಪರೀಕ್ಷೆ ನಡೆಸಿದ ಇರಾನ್ ಎಚ್ಚರಿಕೆ

ಪ. ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

SCROLL FOR NEXT