ಯುಪಿ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ 
ದೇಶ

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಲ್ಲಿ ತುರ್ತು ಭೂಸ್ಪರ್ಶ

ಮೌರ್ಯ ಅವರ ಆಪ್ತ ಬಿಜೆಪಿ ನಾಯಕರೊಬ್ಬರ ಪ್ರಕಾರ, ಉಪಮುಖ್ಯಮಂತ್ರಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಹೋಗುತ್ತಿದ್ದರು.

ಲಖನೌ: ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಮೌರ್ಯ ಅವರ ಆಪ್ತ ಬಿಜೆಪಿ ನಾಯಕರೊಬ್ಬರ ಪ್ರಕಾರ, ಉಪಮುಖ್ಯಮಂತ್ರಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಹೋಗುತ್ತಿದ್ದರು.

ಮೌರ್ಯ, ಅವರ ಸಹಾಯಕ ವಿವೇಕ್ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ಐದು ಜನರಿಂದ ಹೆಲಿಕಾಪ್ಟರ್ ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

"ಟೇಕ್ ಆಫ್ ಆದ ತಕ್ಷಣ ಹೆಲಿಕಾಪ್ಟರ್ ಒಳಗೆ ಹೊಗೆ ಕಾಣಿಸಿಕೊಂಡಿತು, ಪೈಲಟ್‌ಗಳು ಲಖನೌ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಆಯ್ಕೆ ಮಾಡಿಕೊಂಡರು" ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಮೌರ್ಯ ಅವರು ಆರೋಗ್ಯವಾಗಿದ್ದಾರೆ ಮತ್ತು ನಂತರ ಮತ್ತೊಂದು ಹೆಲಿಕಾಪ್ಟರ್‌ನಲ್ಲಿ ಕೌಶಂಬಿಗೆ ಹೋಗುತ್ತಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel