ಗುರ್ಮೀತ್ ರಾಮ್ ರಹೀಮ್ ಸಿಂಗ್ 
ದೇಶ

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ

2019ರಲ್ಲಿ ವಿಶೇಷ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.

ಚಂಡೀಗಢ: 2002ರಲ್ಲಿ ನಡೆದ ಪತ್ರಕರ್ತರ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್-ಹರಿಯಾಣ ಹೈಕೋರ್ಟ್ ಖುಲಾಸೆಗೊಳಿಸಿದೆ.

2019ರಲ್ಲಿ ವಿಶೇಷ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಹಾಗೂ ನ್ಯಾಯಮೂರ್ತಿ ವಿಕ್ರಮ್ ಅಗರ್ವಾಲ್ ಅವರ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಆದರೆ, ಇದೇ ಪ್ರಕರಣದ ಇತರ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿ ಅವರ ವಿರುದ್ಧದ ಶಿಕ್ಷೆಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿದೆ.

2002ರಲ್ಲಿ ‘ಪೂರಾ ಸಚ್’ ಪತ್ರಿಕೆಯ ಸಂಪಾದಕರಾಗಿದ್ದ ರಾಮ್ ಚಂದರ್ ಛತ್ರಪತಿ ಅವರನ್ನು ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಡೇರಾ ಕೇಂದ್ರದಲ್ಲಿ ಮಹಿಳಾ ಭಕ್ತೆಯರ ಲೈಂಗಿಕ ಶೋಷಣೆ ಕುರಿತು ಅನಾಮಧೇಯ ಪತ್ರವನ್ನು ಪ್ರಕಟಿಸಿದ ಬಳಿಕ ಈ ಹತ್ಯೆ ನಡೆದಿದೆ ಎಂದು ಆರೋಪಿಸಲಾಗಿತ್ತು.

ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದ್ದು, ತನಿಖೆಯ ಬಳಿಕ ಗುರ್ಮೀತ್ ರಾಮ್ ರಹೀಮ್ ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು.

2019ರಲ್ಲಿ ಪಂಚಕುಲಾದ ಸಿಬಿಐ ವಿಶೇಷ ನ್ಯಾಯಾಲಯ ರಾಮ್ ರಹೀಮ್ ಹಾಗೂ ಇನ್ನೂ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಆದರೆ, ಪ್ರಕರಣದ ಸಾಕ್ಷ್ಯಗಳನ್ನು ಪುನರ್ ಪರಿಶೀಲಿಸಿದ ನಂತರ ಹೈಕೋರ್ಟ್ ರಾಮ್ ರಹೀಮ್ ಅವರನ್ನು ಖುಲಾಸೆಗೊಳಿಸಿದೆ.

2017ರಿಂದ ರೋಹ್ಟಕ್‌ನ ಸುನಾರಿಯಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್, ಇಬ್ಬರು ಮಹಿಳಾ ಭಕ್ತೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್