ಜ್ಞಾನೇಶ್ ಕುಮಾರ್ ಮತ್ತು ಕಲ್ಯಾಣ್ ಬ್ಯಾನರ್ಜಿ 
ದೇಶ

CEC ಆಗಿರದಿದ್ದರೇ ಬೆರಳು ಕತ್ತರಿಸುತ್ತಿದ್ದೆ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ವಾಗ್ದಾಳಿ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಂವಾದದ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದರು

ಕೋಲ್ಕತ್ತಾ: ಜ್ಞಾನೇಶ್ ಕುಮಾರ್ ಅವರು ಸಾಂವಿಧಾನಿಕ ಹುದ್ದೆಯನ್ನು ಹೊಂದಿರದಿದ್ದರೆ, ಚುನಾವಣಾ ಸಮಿತಿಯ ಮುಖ್ಯಸ್ಥರ "ಬೆರಳನ್ನೇ ಕತ್ತರಿಸುತ್ತಿದ್ದೆ" ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿದ್ದಾರೆ.

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಂವಾದದ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದರು. ಭಾರತ ಚುನಾವಣಾ ಆಯೋಗ ನಡೆಸಿದ ವಿಶೇಷ ತೀವ್ರ ಪರಿಷ್ಕರಣಾ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ ನಂತರ ಈ ಸಭೆ ನಡೆಸಲಾಯಿತು.

ಕೋಲ್ಕತ್ತಾದ ಎಸ್ಪ್ಲನೇಡ್ ಮೆಟ್ರೋ ಚಾನೆಲ್‌ನಲ್ಲಿ ನಡೆದ ಪಕ್ಷದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಕಳೆದ ತಿಂಗಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಜ್ಞಾನೇಶ್ ಕುಮಾರ್ ನಡುವೆ ನಡೆದ ಚುನಾವಣೆ ಕಚೇರಿಯಲ್ಲಿ ಘಟನೆ ಉಲ್ಳೇಖಿಸಿ, ಅವರು ನಮ್ಮ ನಾಯಕಿ ಮಮತಾ ಬ್ಯಾನರ್ಜಿಯವರೊಂದಿಗೆ ಬೆರಳು ತೋರಿಸಿ ತುಂಬಾ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ಸಿಇಸಿಯಾಗಿರದಿದ್ದರೆ, ಆ ದಿನ ನಾನು ಅವರ ಬೆರಳನ್ನು ಕತ್ತರಿಸುತ್ತಿದ್ದೆ ಎಂದು ಕಿಡಿಕಾರಿದ್ದಾರೆ.

ಇನ್ನೂ ಕಲ್ಯಾಣ್ ಬ್ಯಾನರ್ಜಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಈ ಹೇಳಿಕೆಗಳು ಪ್ರಜಾಪ್ರಭುತ್ವ ಅಥವಾ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಯಾವುದೇ ಗೌರವವಿಲ್ಲದ ಟಿಎಂಸಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಸುವೇಂಧು ಅಧಿಕಾರಿ ಟೀಕಿಸಿದ್ದಾರೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಚುನಾವಣಾ ಆಯೋಗ ನಿರ್ವಹಿಸುತ್ತಿರುವ ರೀತಿಯನ್ನು ಕಲ್ಯಾಣ್ ಬ್ಯಾನರ್ಜಿ ತೀವ್ರವಾಗಿ ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!

Ramayana Trailer: ಕಲರ್ ಫುಲ್ ಸ್ಯಾರಿ, ಓಪನ್ ಹೇರ್, ಕೈಕೇಯಿ ಪಾತ್ರಧಾರಿ ಲಾರಾ ದತ್ತಾ ಭಾರಿ ಟ್ರೋಲ್!

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ