ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಬಗ್ಗೆ ವಿರೋಧ ಪಕ್ಷದ ನಾಯಕರಿಂದ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳೊಂದಿಗೆ ಸಂಸತ್ ಆವರಣದಲ್ಲಿ ಪ್ರತಿಭಟನೆ. 
ದೇಶ

'ವಿರೋಧ ಪಕ್ಷದ ಎಲ್ಲಾ 240 ಸಂಸದರನ್ನು ಅಮಾನತುಗೊಳಿಸಲು ಸರ್ಕಾರ ಸಂಚು'

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಇಂದು ಆರಂಭವಾಗಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.

ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಹಿಂದಿನ ಬಜೆಟ್ ಅಧಿವೇಶನದಲ್ಲಿ ತಟಸ್ಥತೆಯನ್ನು ತ್ಯಜಿಸಿ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಿದ್ದಾರೆ ಎಂದು ಕಾಂಗ್ರೆಸ್ ಸಂಸದ ಮಾಣಿಕಮ್ ಟ್ಯಾಗೋರ್ ಅವರು ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ "ವಿಪಕ್ಷದ 240 ಸಂಸದರನ್ನು" ಅಮಾನತುಗೊಳಿಸುವ ಸಂಚು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಇಂದು ಆರಂಭವಾಗಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದಾರೆ.

ANI ಜೊತೆ ಮಾತನಾಡಿದ ಟ್ಯಾಗೋರ್, "ಸ್ಪೀಕರ್ ತಟಸ್ಥವಾಗಿ ವರ್ತಿಸಬೇಕು. ಆದರೆ ಅದು ನಡೆಯುತ್ತಿಲ್ಲ. ಸ್ಪೀಕರ್ ವಿರೋಧ ಪಕ್ಷದ ಸದಸ್ಯರನ್ನು ಮಾತನಾಡಲು ಬಿಡುವುದಿಲ್ಲ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡಬೇಕು ಎಂದಿದ್ದಾರೆ.

ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸುತ್ತಾರೆ ಮತ್ತು ಮಹಿಳಾ ವಿರೋಧ ಪಕ್ಷದ ಸಂಸದರ ವಿರುದ್ಧ ಆರೋಪಗಳನ್ನು ಮಾಡುತ್ತಾರೆ. ಅವರು(ಆಡಳಿತ ಪಕ್ಷ) ವಿರೋಧ ಪಕ್ಷದ ಎಲ್ಲಾ 240 ಸಂಸದರನ್ನು ಅಮಾನತುಗೊಳಿಸಲು ಯೋಜಿಸಿದ್ದಾರೆ. ಇದರ ವಿರುದ್ಧ ನಾವು ಅವಿಶ್ವಾಸ ನಿರ್ಣಯ ತಂದಿದ್ದೇವೆ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ