ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಬಗ್ಗೆ ವಿರೋಧ ಪಕ್ಷದ ನಾಯಕರಿಂದ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳೊಂದಿಗೆ ಸಂಸತ್ ಆವರಣದಲ್ಲಿ ಪ್ರತಿಭಟನೆ. 
ದೇಶ

ಇರಾನ್-ಇಸ್ರೇಲ್ ಸಂಘರ್ಷ: ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯಿಸಿ ಸಂಸತ್ ಸಂಕೀರ್ಣದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು. ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆ ನಡೆಸಬೇಕೆಂದು ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು, ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಕಾರ್ಯತಂತ್ರದ ಕುರಿತು ಚರ್ಚಿಸಲು ಸಂಸತ್ ಭವನದ ಸಂಕೀರ್ಣದಲ್ಲಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ವಿಪಕ್ಷಗಳ ನಾಯಕರು ಸಭೆ ಸೇರಿದ್ದರು.

ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಡಿಎಂಕೆಯ ದಯಾನಿಧಿ ಮಾರನ್, ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ಮತ್ತು ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ನಡೆಯುತ್ತಿರುವ ಸಂಘರ್ಷವು ಈಗ ಭಾರತದ ಭದ್ರತೆ, ಆರ್ಥಿಕತೆ ಮತ್ತು ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸದ್ಯದ ಈ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿ ಕುರಿತು ಬಜೆಟ್ ಅಧಿವೇಶನದ ಎರಡನೇ ಭಾಗದ ವೇಳೆ ಸಂಸತ್ತಿನಲ್ಲಿ ಪೂರ್ಣ ಪ್ರಮಾಣದ ಚರ್ಚೆ ಕಡ್ಡಾಯವಾಗಿದೆ' ಎಂದು ಖರ್ಗೆ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

'EAM ಏಕಪಕ್ಷೀಯ ಹೇಳಿಕೆ ನೀಡುವ ಬದಲು ರಾಷ್ಟ್ರಕ್ಕೆ ಸ್ಪಷ್ಟವಾಗಿ ತಿಳಿಸಬೇಕು. ಇಂಧನ ಸರಬರಾಜು, ವ್ಯಾಪಾರ ಮತ್ತು ರಫ್ತುಗಳನ್ನು ರಕ್ಷಿಸಲು ವಿವರವಾದ ಯೋಜನೆ ಅಗತ್ಯವಿದ್ದು, ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ತಡೆಯಬೇಕು. ಭಾರತ ಸರ್ಕಾರವು ಜನರ ಕಾಳಜಿಗಳನ್ನು ನಿರ್ಲಕ್ಷಿಸುವ ಬದಲು ಅವರ ಕಲ್ಯಾಣದ ಕಡೆಗೆ ಸೂಕ್ಷ್ಮವಾಗಿ ವರ್ತಿಸಬೇಕೆಂದು ವಿರೋಧ ಪಕ್ಷ ಬಯಸುತ್ತದೆ' ಎಂದು ಸಭೆಯ ನಂತರ ಖರ್ಗೆ ಹೇಳಿದರು.

ನಂತರ, ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸಿ, ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ "ಮೌನ" ವಹಿಸಿರುವುದನ್ನು ಖಂಡಿಸಿದರು.

'ಕೊಲ್ಲಿ ಉರಿಯುತ್ತಿದೆ, ತೈಲ ಆಘಾತ. ಭಾರತೀಯರು ಸಿಲುಕಿಕೊಂಡಿದ್ದಾರೆ. ಭಾರತಕ್ಕೆ ನಾಯಕತ್ವ ಬೇಕು - ಮೌನವಲ್ಲ' ಎಂದು ಬರೆದ ಬೃಹತ್ ಬ್ಯಾನರ್‌ನೊಂದಿಗೆ ಸಂಸದರು ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿಕೆ

ಭಾರತವು ಉದ್ವಿಗ್ನತೆಯನ್ನು ಕಡಿಮೆ ಮಾಡಿ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳಬೇಕೆಂದು ಪ್ರತಿಪಾದಿಸುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಮಾತನಾಡುತ್ತಾ, ಈ ಪ್ರದೇಶದ ಎಲ್ಲ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಬಗ್ಗೆ ಒತ್ತಿ ಹೇಳಿದರು.

ಫೆಬ್ರುವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮಿಲಿಟರಿ ದಾಳಿ ನಡೆಸಿ ಅಲ್ಲಿನ ಸರ್ವೋಚ್ಛ ನಾಯಕ ಖಮೇನಿಯ ಹತ್ಯೆ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಈ ಪ್ರದೇಶದಲ್ಲಿನ ಅಮೆರಿಕದ ಸ್ಥಾನಗಳ ಮೇಲೆ ಮತ್ತು ಇಸ್ರೇಲ್ ಮೇಲೆ ದಾಳಿ ಮಾಡಿತು.

'ಭಾರತೀಯ ಪ್ರಜೆಗಳ ಸುರಕ್ಷತೆ ಹಾಗೂ ಇಂಧನ ಭದ್ರತೆ ಮತ್ತು ವ್ಯಾಪಾರದಂತಹ ರಾಷ್ಟ್ರೀಯ ಹಿತಾಸಕ್ತಿಗಳು ಸರ್ಕಾರಕ್ಕೆ ಪ್ರಮುಖ ಆದ್ಯತೆಯಾಗಿವೆ. ಭಾರತವು ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳುವಂತೆ ಒತ್ತಾಯಿಸುತ್ತದೆ. ನಾವು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂಯಮ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದನ್ನು ಪ್ರತಿಪಾದಿಸುತ್ತೇವೆ. ಈ ಪ್ರದೇಶದಲ್ಲಿನ ಭಾರತೀಯ ಸಮುದಾಯದ ಯೋಗಕ್ಷೇಮ ಮತ್ತು ಸುರಕ್ಷತೆಯು ನಮ್ಮ ಆದ್ಯತೆಯಾಗಿದೆ. ಮತ್ತು ಇಂಧನ ಭದ್ರತೆ ಮತ್ತು ವ್ಯಾಪಾರ ಸೇರಿದಂತೆ ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳು ಯಾವಾಗಲೂ ಅತ್ಯುನ್ನತವಾಗಿರುತ್ತವೆ' ಎಂದು ಜೈಶಂಕರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

KL Rahul ಆಯ್ತು ಇದೀಗ ರಿಷಬ್ ಪಂತ್ ನಾಯಕತ್ವಕ್ಕೆ ಕುತ್ತು?: LSG ಡೈರೆಕ್ಟರ್ ಟಾಮ್ ಮೂಡಿ ಸುಳಿವು!

ಅಮೆರಿಕದಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ಹೇಳಿಕೆ: ಮಾರ್ಕೊ ರೂಬಿಯೊ ಹೇಳಿದ್ದೇನು?

Cannes 2026 Closing Ceremony: ಬಿಳಿ ಪ್ಯಾಂಟ್ ಸೂಟ್ ನಲ್ಲಿ ಕಂಗೊಳಿಸಿದ ಐಶ್ವರ್ಯ ರೈ!

SCROLL FOR NEXT