ಫಾರೂಕ್ ಅಬ್ದುಲ್ಲಾ 
ದೇಶ

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ; Video

ಗುಂಡಿನ ದಾಳಿ ನಡೆಸಿದ ಕಮಲ್ ಸಿಂಗ್ ಜಮ್ವಾಲ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಬಂಧಿಸಿ ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜಮ್ಮು: ಜಮ್ಮುವಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಭದ್ರತಾ ಸಿಬ್ಬಂದಿ ದಾಳಿಕೋರನನ್ನು ಬಂಧಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡು ಹಾರಿಸಲಾಗಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಬುಧವಾರ (ಮಾರ್ಚ್ 11) ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರ ವಿವಾಹ ಸಮಾರಂಭದಲ್ಲಿ ಅಬ್ದುಲ್ಲಾ ಭಾಗವಹಿಸಿದ್ದರು.

ಗುಂಡಿನ ದಾಳಿ ನಡೆಸಿದ ಕಮಲ್ ಸಿಂಗ್ ಜಮ್ವಾಲ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಬಂಧಿಸಿ ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮತ್ತು ಫಾರೂಕ್ ಅಬ್ದುಲ್ಲಾ ಅವರ ಪುತ್ರ ಒಮರ್ ಅಬ್ದುಲ್ಲಾ, 'ದೇವರು ಕರುಣಾಮಯಿ. ನನ್ನ ತಂದೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪ್ರಸ್ತುತ ದಾಳಿ ಮಾಡಿದ್ದೇಕೆ, ಯಾರು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಆದರೆ ಲೋಡ್ ಮಾಡಿದ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯೊಬ್ಬರು ನನ್ನ ತಂದೆಯ ಹತ್ತಿರ ಬಂದು ಗುಂಡು ಹಾರಿಸಿದ್ದಾರೆ ಎಂಬುದು ತಿಳಿದುಬಂದಿದೆ ಭದ್ರತಾ ತಂಡವು ಗುಂಡನ್ನು ತಡೆದು ಹತ್ಯೆಯ ಪ್ರಯತ್ನವನ್ನು ವಿಫಲಗೊಳಿಸಿದೆ.

ಫಾರೂಕ್ ಅಬ್ದುಲ್ಲಾ ಅವರಿಗೆ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಇದ್ದರು. ಚೌಧರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು.

ಮದುವೆ ಮಂಟಪದ ಹೊರಭಾಗದಲ್ಲಿ ಆರೋಪಿಯು ಕಾಯುತ್ತಿದ್ದ. ಅಬ್ದುಲ್ಲಾ ಹಾಗೂ ಚೌಧರಿ ಅವರು ಹೊರಗೆ ಬರುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಲು ಆರೋಪಿ ಯತ್ನಿಸಿದ್ದಾನೆ. ಆಗ, ಸ್ಥಳದಲ್ಲಿಯೇ ಇದ್ದ ಇಬ್ಬರು ಪೊಲೀಸ್‌ ಅಧಿಕಾರಿಗಳು ಆತನನ್ನು ತಕ್ಷಣವೇ ತಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೊಲೀಸ್‌ ಅಧಿಕಾರಿಗಳಿಂದ ಕೊಸರಿಕೊಂಡು, ಗುಂಡು ಹಾರಿಸಲು ಆರೋಪಿ ಯತ್ನಿಸಿದ್ದಾನೆ. ಬಂದೂಕು ಕಿತ್ತುಕೊಂಡ ಪೊಲೀಸ್‌ ಅಧಿಕಾರಿಗಳು, ಆತನನ್ನು ವಶಕ್ಕೆ ಪಡೆದರು ಎಂದೂ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!