ಫರ್ಮಾನ್ ಖಾನ್ ಜೊತೆ ಮೊನಾಲಿಸಾ ವಿವಾಹ 
ದೇಶ

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ! Video

ಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರು ವಿವಾಹವಾಗಿದ್ದಾರೆ. ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು.

ತಿರುವನಂತಪುರಂ: ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಬೋಂಸ್ಲೆ ಹಸೆಮಣೆ ಏರಿದ್ದಾರೆ.

ಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರು ವಿವಾಹವಾಗಿದ್ದಾರೆ. ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು.

ಮಹಾರಾಷ್ಟ್ರದ ಫರ್ಮಾನ್ ಖಾನ್ ನಟ ಹಾಗೂ ಮಾಡೆಲ್‌. ಮಧ್ಯಪ್ರದೇಶದ ಮೊನಾಲಿಸಾಗೆ ಒಂದೂವರೆ ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ. ಪರಿಚಯ ದಿನಕಳೆದಂತೆ ಪ್ರೀತಿಗೆ ತಿರುಗಿತು. ಪೂವಾರ್‌ನಲ್ಲಿ ಈಗ ಮೊನಾಲಿಸಾ ಅಭಿನಯದ ಚಿತ್ರದ ಶೂಟಿಂಗ್‌ ನಡೆಯುತ್ತಿದೆ. ಶೂಟಿಂಗ್‌ ಸ್ಪಾಟ್‌ನಿಂದಲೇ ತಂಬಾನೂರು ಠಾಣೆಗೆ ಬಂದು ತನ್ನ ತಂದೆ ವಿರುದ್ಧ ಮೊನಾಲಿಸಾ ದೂರು ನೀಡಿದ್ದಳು.

ಬುಧವಾರ(ಮಾ.11) ತಂಪನೂರು ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡ ಮೊನಾಲಿಸಾ, ನಾನು ಸಿನಿಮಾ ಚಿತ್ರೀಕರಣವೊಂದರ ಭಾಗವಾಗಿ ಇಲ್ಲಿಗೆ ಬಂದಿದ್ದೇನೆ. ನನ್ನ ತಂದೆ ನನ್ನನ್ನು ಬಲವಂತವಾಗಿ ನಮ್ಮ ಊರಿಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ದಯವಿಟ್ಟು ನನ್ನನ್ನು ಕಾಪಾಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾಳೆ.

ಮೊನಾಲಿಸಾ ಹಾಗೂ ಉತ್ತರ ಪ್ರದೇಶ ಮೂಲದ ಅವಳ ಸ್ನೇಹಿತ ಪೊಲೀಸ್‌ ಠಾಣೆಗೆ ಬಂದು ರಕ್ಷಣೆ ಕೋರಿದ್ದಾರೆ. ಅವಳ ಅಭಿಪ್ರಾಯಕ್ಕೆ ವಿರುದ್ಧವಾಗಿ ಅವಳ ತಂದೆಯು ಅವಳನ್ನು ಮರಳಿ ಕರೆಸಿಕೊಳ್ಳಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದ್ದಾಳೆ. ಈ ವೇಳೆ ಸಿನಿಮಾದ ಇತರೆ ಸಿಬ್ಬಂದಿಗಳು ಕೂಡ ಠಾಣೆಗೆ ಬಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ವಳು ಅಪ್ರಾಪ್ತೆಯಲ್ಲದೇ ಇರುವುದಿಂದ, ಅವಳಿಷ್ಟದಂತೆ ಅವಳು ನಿರ್ಧಾರ ತೆಗೆದುಕೊಳ್ಳಬಹುದು. ಅವಳ ತಂದೆ ಈಗಾಗಲೇ ಅವರ ಊರಿಗೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರ ಸಹಾಯದೊಂದಿಗೆ ಮೊನಾಲಿಸಾ ತನ್ನ ಗೆಳೆಯನೊಂದಿಗೆ ಮದುವೆಯಾಗಿದ್ದಾಳೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video