ಲೋಕಸಭೆ 
ದೇಶ

2 ಲಕ್ಷ ಕೋಟಿ ರೂ ಪೂರಕ ಬಜೆಟ್ ಗೆ ಲೋಕಸಭೆ ಅನುಮೋದನೆ; ಕಲಾಪ ನಾಳೆಗೆ ಮುಂದೂಡಿಕೆ

ಪೂರಕ ಬಜೆಟ್ ಮೂಲಕ, ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 2.81 ಲಕ್ಷ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಖರ್ಚು ಮಾಡಲು ಲೋಕಸಭೆಯ ಅನುಮೋದನೆ ಕೋರಿತ್ತು.

ನವದೆಹಲಿ: 2026ನೇ ಸಾಲಿನ ಎರಡನೇ ಹಂತದ ಅನುದಾನದ ಪೂರಕ ಬಜೆಟ್ ಅನ್ನು ಶುಕ್ರವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರಕ್ಕೆ ಹೆಚ್ಚುವರಿಯಾಗಿ 2.01 ಲಕ್ಷ ಕೋಟಿ ರೂ. ಖರ್ಚು ಮಾಡಲು ಅವಕಾಶ ಮಾಡಿಕೊಟ್ಟಿದೆ.

ಪೂರಕ ಬಜೆಟ್ ಮೂಲಕ, ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 2.81 ಲಕ್ಷ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಖರ್ಚು ಮಾಡಲು ಲೋಕಸಭೆಯ ಅನುಮೋದನೆ ಕೋರಿತ್ತು. ಈ ಪೂರಕದಲ್ಲಿ ಪ್ರಸಕ್ತ ಹಣಕಾಸು ವರ್ಷಕ್ಕೆ ಅಂದಾಜು 80,000 ಕೋಟಿ ರೂ.ಗಳ ಹೆಚ್ಚುವರಿ ಸ್ವೀಕೃತಿಯೊಂದಿಗೆ, ನಿವ್ವಳ ಹೆಚ್ಚುವರಿ ನಗದು ವೆಚ್ಚವು 2.01 ಲಕ್ಷ ಕೋಟಿ ರೂ.ಗಳಾಗಿರುತ್ತದೆ.

ಹೆಚ್ಚುವರಿ ವೆಚ್ಚದ ಹೊರತಾಗಿಯೂ, ಪ್ರಸಕ್ತ ಹಣಕಾಸು ವರ್ಷದ(2025-26) ಹಣಕಾಸಿನ ಕೊರತೆಯು ಪರಿಷ್ಕೃತ ಅಂದಾಜುಗಳ(RE) ಒಳಗೆ ಇರುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚರ್ಚೆಯ ವೇಳೆ ಹೇಳಿದರು.

ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಪೂರಕ್ ಬಜೆಟ್ ಅನ್ನು ಅಂಗೀಕರಿಸಲಾಯಿತು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ಎಲ್‌ಪಿಜಿ ಲಭ್ಯತೆಯ ಬಗ್ಗೆ ವಿರೋಧ ಪಕ್ಷದ ಸದಸ್ಯರು ತೀವ್ರ ಪ್ರತಿಭಟನೆ ನಡೆಸುತ್ತಿದ್ದರು.

ಪೂರಕ ಬಜೆಟ್ ಅಂಗೀಕಾರದ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!