ಮೊನಾಲಿಸಾ ಮತ್ತು ಫರ್ಮಾನ್ ಖಾನ್ 
ದೇಶ

ಮಗಳನ್ನು ವಾಪಸ್ ಮನೆಗೆ ಕರೆತರಲು ಸಹಾಯ ಮಾಡಿ: ಮಧ್ಯ ಪ್ರದೇಶ CMಗೆ ಮೊನಾಲಿಸಾ ತಂದೆ ಮನವಿ

ಕೇರಳದಿಂದ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ತಂದೆ ಜಯಸಿಂಗ್ ಭೋಂಸ್ಲೆ, ಮೊನಾಲಿಸಾ "ಲವ್ ಜಿಹಾದ್" ಗೆ ಬಲಿಯಾಗಿದ್ದಾರೆ ಎಂದು ಆರೋಪಿಸಿದರು.

ಭೋಪಾಲ್: ಕಳೆದ ವರ್ಷ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಫೋಟೋ ವೈರಲ್ ಆಗುವ ಮೂಲಕ ರಾತ್ರೋರಾತ್ರಿ ಖ್ಯಾತಿ ಗಳಿಸಿದ್ದ ಯುವತಿ ಮೊನಾಲಿಸಾ ಭೋಂಸ್ಲೆ ಅವರು ಕೇರಳದಲ್ಲಿ ಮುಸ್ಲಿಂ ಪ್ರೇಮಿ ಫರ್ಮನ್ ಖಾನ್ ಅವರನ್ನು ಮದುವೆಯಾಗಿದ್ದಾರೆ.

ಈ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಆಕೆಯ ತಂದೆ, ಕೇರಳದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿರುವ ತನ್ನ ಮಗಳನ್ನು ಸುರಕ್ಷಿತವಾಗಿ ಮರಳಿ ರಾಜ್ಯಕ್ಕೆ ಕರೆತರಬೇಕು ಎಂದು ಶುಕ್ರವಾರ ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಮನವಿ ಮಾಡಿದ್ದಾರೆ.

ಖಾರ್ಗೋನ್‌ನ ಮಹೇಶ್ವರ ಪಟ್ಟಣದ ಅಲೆಮಾರಿ ಪಾರ್ಧಿ ಸಮುದಾಯದ ಮೊನಾಲಿಸಾ ಭೋಂಸ್ಲೆ(18) ಅವರು ಬುಧವಾರ ಕೇರಳದ ಅರುಮನೂರಿನ ನೈನಾರ್ ದೇವಸ್ಥಾನದಲ್ಲಿ ಫರ್ಮಾನ್ ಖಾನ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ.

ಕೇರಳದಿಂದ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ತಂದೆ ಜಯಸಿಂಗ್ ಭೋಂಸ್ಲೆ, ಮೊನಾಲಿಸಾ "ಲವ್ ಜಿಹಾದ್" ಗೆ ಬಲಿಯಾಗಿದ್ದಾರೆ ಎಂದು ಆರೋಪಿಸಿದರು.

"ನನ್ನ ಮಗಳು ದೇಶಾದ್ಯಂತ ಹೆಸರು ಗಳಿಸಿದ್ದಾಳೆ. ಮೊನಾಲಿಸಾಳನ್ನು ಸುರಕ್ಷಿತವಾಗಿ ಮಧ್ಯಪ್ರದೇಶಕ್ಕೆ ಕರೆತರುವಂತೆ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ವಿನಂತಿಸುತ್ತೇನೆ. ಫರ್ಮಾನ್ ಖಾನ್ ಎಂಬ ಮುಸ್ಲಿಂ ಯುವಕ ಅವಳನ್ನು ಮೋಸದಿಂದ ಮದುವೆ ಆಗಿದ್ದಾನೆ. ಇದು ಲವ್ ಜಿಹಾದ್ ಪ್ರಕರಣ" ಎಂದು ಜಯಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ತಮ್ಮ ಮಗಳು ಚಲನಚಿತ್ರಗಳಲ್ಲಿ ನಟಿಸುತ್ತಿದ್ದಾಳೆಂದು ಮಾತ್ರ ನನಗೆ ಗೊತ್ತಿತ್ತು. "ನನ್ನ ಮಗಳು ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾಳೆ ಎಂದು ನನಗೆ ಹೇಳಲಾಯಿತು. ಕೆಲವರು ತನಗೆ ನಟನೆ ಮತ್ತು ನೃತ್ಯವನ್ನು ಕಲಿಸುತ್ತಿದ್ದಾರೆಂದು ಅವಳು ಸ್ವತಃ ಹೇಳಿದ್ದಳು. ಭವಿಷ್ಯದಲ್ಲಿ ಅವಳು ಚಲನಚಿತ್ರಗಳಲ್ಲಿ ಅಭಿನಯಿಸಲು ಸಾಧ್ಯವಾಗುವಂತೆ ತರಬೇತಿ ನೀಡುವುದಾಗಿ ಅವರು ಹೇಳಿದ್ದರು. ಆದರೆ ಈ ರೀತಿ ಆಗುತ್ತದೆ ಎಂದು ನನಗೆ ತಿಳಿದಿರಲಿಲ್ಲ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!