ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ 
ದೇಶ

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

ಮೋದಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಬ್ರಿಗೇಡ್ ಪರೇಡ್ ಮೈದಾನದಿಂದ ಸುಮಾರು 5 ಕಿ.ಮೀ ದೂರದಲ್ಲೇ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನ ಕೋಲ್ಕತ್ತಾ ಕೇಂದ್ರ ಭಾಗದ ಗಿರೀಶ್ ಪಾರ್ಕ್ ಬಳಿ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.

ಮೋದಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಬ್ರಿಗೇಡ್ ಪರೇಡ್ ಮೈದಾನದಿಂದ ಸುಮಾರು 5 ಕಿ.ಮೀ ದೂರದಲ್ಲೇ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಬಿಜೆಪಿ ಕಾರ್ಯಕರ್ತರು ಪ್ರಧಾನಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗುತ್ತಾ ರ್ಯಾಲಿ ಸ್ಥಳದ ಕಡೆಗೆ ಹೋಗುತ್ತಿದ್ದಾಗ ಕೆಲವು ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಕಲ್ಲುಗಳನ್ನು ಎಸೆಯಲಾಯಿತು ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

"ಯಾವುದೇ ಪ್ರಚೋದನೆಯಿಲ್ಲದೆ ನಮ್ಮ ಮೇಲೆ ಕಲ್ಲುಗಳನ್ನು ಎಸೆಯಲಾಯಿತು. ಅವರು ನಮ್ಮನ್ನೂ ನಿಂದಿಸಿದರು" ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಬಂಗಾಳಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಎರಡೂ ಪಕ್ಷಗಳ ಬೆಂಬಲಿಗರು ಪರಸ್ಪರ ಕಲ್ಲುಗಳನ್ನು ಎಸೆದು, ಘೋಷಣೆಗಳನ್ನು ಕೂಗಿದ್ದಾರೆ.

ಘರ್ಷಣೆಯ ಸಮಯದಲ್ಲಿ ಹಲವಾರು ವಾಹನಗಳು ಹಾನಿಗೊಳಗಾದವು ಎಂದು ಬಿಜೆಪಿ ಆರೋಪಿಸಿದೆ.

ಆದಾಗ್ಯೂ, ಸ್ಥಳೀಯ ಟಿಎಂಸಿ ಕಾರ್ಯಕರ್ತರು, ಬಿಜೆಪಿ ಆರೋಪಗಳನ್ನು ನಿರಾಕರಿಸಿದ್ದು, ಅವರೇ ಮೊದಲು ನಮ್ಮನ್ನು ನಿಂದಿಸಿ ತಮ್ಮ ಮೇಲೆ ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ.

ಸ್ಥಳೀಯ ಟಿಎಂಸಿ ನಾಯಕರ ನಿವಾಸದ ಮೇಲೂ ಕಲ್ಲುಗಳನ್ನು ಎಸೆಯಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸ್ಥಳದಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯ ರಾಜ್ಯವ್ಯಾಪಿ 'ಪರಿವರ್ತನ ಯಾತ್ರೆ'ಯ ಸಮಾರೋಪ ಸಮಾರಂಭ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆಯಲಿದ್ದು, ಮೋದಿ ರ್ಯಾಲಿಗೆ ಕೇವಲ ಅರ್ಧ ಗಂಟೆ ಮೊದಲು ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!

ಮಂಡ್ಯ: ವಿಸಿ ಫಾರಂನಲ್ಲಿ 14 ಕೋಟಿ ರೂ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಕೇಂದ್ರ ಸಚಿವ ಭೂಮಿಪೂಜೆ!

ಮಂಡಿಯೂರಿದ ಕೇಂದ್ರ: ಜೋಧಪುರ ಜೈಲಿನಿಂದ ಸೋನಮ್ ವಾಂಗ್ಚುಕ್ ಬಿಡುಗಡೆ

ಹೊಸ ನಟಿಯರನ್ನು ಆಮಿಷಕ್ಕೆ ಒಳಪಡಿಸಿ ವೇಶ್ಯಾವಾಟಿಕೆಗೆ ತಳ್ಳುತ್ತಾರೆ: ನಟಿ ತನುಶ್ರೀ ದತ್ತಾ

LPG ಸಿಲಿಂಡರ್ ಸಂಗ್ರಹಣೆ, ಕಾಳಸಂತೆಯಲ್ಲಿ ಮಾರಾಟದ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ

SCROLL FOR NEXT