ಸಾಂದರ್ಭಿಕ ಚಿತ್ರ 
ದೇಶ

Jammu-Kashmir: ಪೂಂಚ್‌ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮ

ಕೂಡಲೇ ಅವರನ್ನು ತಕ್ಷಣವೇ ಪೋಥಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, JCO ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಶನಿವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಜ್ಯೂನಿಯರ್ ಕಮಿಷನ್ಡ್ ಆಫೀಸರ್ (JCO) ಹುತಾತ್ಮರಾಗಿದ್ದಾರೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.

ಆಪರೇಷನ್ ಶೇರಿ ಕಲಾನ್‌ನ ಭಾಗವಾಗಿ ಪೂಂಚ್‌ನ ಸಾಮಾನ್ಯ ಪ್ರದೇಶದಲ್ಲಿ ಸುದೀರ್ಘ ಕಾರ್ಯಾಚರಣೆಯ ಸಮಯದಲ್ಲಿ ಸವಾಲಿನ ಮತ್ತು ಒರಟಾದ ಭೂಪ್ರದೇಶದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ, ಸುಬೇದಾರ್ ಸಂದೀಪ್ ಕುಮಾರ್ ಢಾಕಾ ಜಾರಿಬಿದಿದ್ದಾರೆ.

ಕೂಡಲೇ ಅವರನ್ನು ತಕ್ಷಣವೇ ಪೋಥಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, JCO ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸೇನೆ ಪೋಸ್ಟ್ ಮಾಡಿದೆ.

ಈ ತೀವ್ರವಾದ ದು:ಖದ ಸಂದರ್ಭದಲ್ಲಿ ಆಗಲಿದ ಯೋಧನ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಕೊನೆಯ ಉಸಿರಿನವರೆಗೂ ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧನ ಸ್ಮರಣೆಯನ್ನು ಗೌರವಿಸುತ್ತೇವೆ" ಎಂದು ವೈಟ್ ನೈಟ್ ಕಾರ್ಪ್ಸ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!